ಟೀಂ ಇಂಡಿಯಾ 
ಕ್ರಿಕೆಟ್

ಸಿಂಹಳಿಯರ ದಾಳಿಗೆ ಸೋತು ಸುಣ್ಣವಾದ ಟೀಂ ಇಂಡಿಯಾ!

ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ತಂಡ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ...

ಧರ್ಮಶಾಲಾ: ಭಾರತ ಪ್ರವಾಸದಲ್ಲಿರುವ ಶ್ರೀಲಂಕಾ ತಂಡ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ. 
ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿತು. ಲಂಕಾ ಪರ ತರಂಗಾ 49, ಮ್ಯಾಥ್ಯೂಸ್ ಅಜೇಯ 25, ಡಿಕ್ವೇಲ್ಲಾ ಅಜೇಯ 26 ರನ್ ಗಳಿಸಿ ತಂಡದ ಗೆಲುವಿನ ಪ್ರಮುಖ ಪಾತ್ರ ವಹಿಸಿದರು. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ 38.2 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಎದುರಾಳಿ ತಂಡಕ್ಕೆ 113 ರನ್ ಗಳ ಸುಲಭದ ಗುರಿ ನೀಡಿತು. ಲಂಕಾ ಮಾರಕ ಬೌಲಿಂಗ್ ಗೆ ತತ್ತರಿಸಿದ ಆರಂಭಿಕ ಆಟಗಾರರು ಕನಿಷ್ಠ 2 ಅಂಕಿಯ ರನ್ ಗಳನ್ನೂ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಮಹೇಂದ್ರ ಸಿಂಗ್ ಧೋನಿ ಲಂಕಾ ಆಟಗಾರರನ್ನು ಏಕಾಂಗಿಯಾಗಿ ಎದುರಿಸಿ 87 ಎಸೆತಗಳಲ್ಲಿ 65 ರನ್ ಗಳಿಸಿದರು. 
ರೋಹಿತ್ ಶರ್ಮಾ (2), ಶಿಖರ್ ಧವನ್ (೦), ಶ್ರೇಯಸ್ ಅಯ್ಯರ್ (9) ದಿನೇಶ್ ಕಾರ್ತಿಕ್ (0)  ಮನೀಷ್ ಪಾಂಡೆ (2) ಹಾರ್ದಿಕ್ ಪಾಂಡ್ಯ (10) ಭುವನೇಶ್ವರ್ ಕುಮಾರ್ (0)  ಕುಲ್ದೀಪ್ ಯಾದವ್(19) ಜಸ್ಪ್ರೀಪ್ ಭೂಮ್ರಾ (0)  ಯಜುವೇಂದ್ರ ಚಾಹಲ್(0)  ರನ್ ಗಳನ್ನು ಗಳಿಸಿದ್ದಾರೆ. 
ಲಂಕಾ ಪರ ಅತ್ಯುತ್ತಮ ಬೌಲಿಂಗ್ ಮಾಡಿರುವ ಸುರಂಗ ಲಕ್ಮಲ್ 13 ರನ್ ನೀಡಿ 4ವಿಕೆಟ್ ತೆಗೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ