ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಮದುವೆ
ಮಿಲನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸೋಮವಾರ ದಕ್ಷಿಣ ಇಟಲಿಯ ಮಿಲನ್ ನಗರದಲ್ಲಿ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಗ್ಗೆ ಮಿಲನ್ ನಗರದಲ್ಲಿ ನಡೆದ ವಿರುಷ್ಕಾ ಮದುವೆಯಲ್ಲಿ ಇಬ್ಬರ ಕುಟುಂಬ ಸದಸ್ಯರು ಹಾಗೂ ಕಲವೇ ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು ಎನ್ನಲಾಗುತ್ತಿದ್ದು, ಅತಿ ಶೀಘ್ರದಲ್ಲಿಯೇ ಇಬ್ಬರೂ ಅಧಿಕೃತವಾಗಿ ಇದನ್ನು ಪ್ರಕಟಿಸುವ ನಿರೀಕ್ಷೆ ಇದೆ.
ಟೀಂ ಇಂಡಿಯಾ ಆಯ್ಕೆ ಸಮಿತಿ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಭಾರತೀಯ ಕ್ರಿಕೆಟಿಗರು ಲಂಕಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲಿ ಭಾಗಿಯಾಗುತ್ತಿರುವ ಕಾರಣ ಕೊಹ್ಲಿಗೆ ಮದುವೆಗೆ ಗೈರಾಗಿದ್ದಾರೆ.
ಆದರೆ ಇದೇ ಡಿಸೆಂಬರ್ 21ರಂದು ಮುಂಬೈನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸುವ ಸಾಧ್ಯತೆ ಇದೆ.