ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ
ನವದೆಹಲಿ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಸೋಮವಾರ ದಕ್ಷಿಣ ಇಟಲಿಯ ಮಿಲನ್ ನಗರದಲ್ಲಿ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ನವ ದಂಪತಿಗಳಿಗೆ ಕ್ರಿಕೆಟ್ ದಿಗ್ಗಜರು ಶುಭಾಶಯ ಕೋರಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾರ ನಾಲ್ಕು ವರ್ಷಗಳ ಪ್ರೀತಿಗೆ ಉಭಯ ಕುಟುಂಬದವರಿಂದ ಮದುವೆಗೆ ಅಧಿಕೃತ ಮುದ್ರೆ ಬಂದಿತ್ತು. ಅಂತೆ ನಿನ್ನೆ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ದಾಂಪತ್ಯ ಜೀವನಕ್ಕೆ ಕೊಹ್ಲಿ ಮತ್ತು ಅನುಷ್ಕಾ ಕಾಲಿಟ್ಟಿರುವುದಕ್ಕೆ ಕ್ರಿಕೆಟ್ ಆಟಗಾರರಾದ ಚೇತೇಶ್ವರ ಪೂಜಾರ, ಶಿಖರ್ ಧವನ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸೇರಿದಂತೆ ಹಲವರು ಟ್ವೀಟರ್ ನಲ್ಲಿ ಶುಭಾ ಕೋರಿದ್ದಾರೆ.
ಡಿಸೆಂಬರ್ 21ರಂದು ದೆಹಲಿಯಲ್ಲಿ ಸಂಬಂಧಿಕರಿಗಾಗಿ ಆರತಕ್ಷತೆ ಮತ್ತು ಡಿಸೆಂಬರ್ 26ರಂದು ಮುಂಬೈನಲ್ಲಿ ಚಿತ್ರರಂಗದ ಸ್ನೇಹಿತರು ಮತ್ತು ಕ್ರಿಕೆಟಿಗರಿಗಾಗಿ ಆರತಕ್ಷತೆಯನ್ನು ಏರ್ಪಡಿಸಲಾಗಿದೆ.