ರೋಹಿತ್ ಶರ್ಮಾ-ಶ್ರೇಯಸ್ ಅಯ್ಯರ್ 
ಕ್ರಿಕೆಟ್

2ನೇ ಏಕದಿನ ಪಂದ್ಯ: ಲಂಕಾಗೆ ಗೆಲ್ಲಲು 393 ರನ್‍ಗಳ ಬೃಹತ್ ಮೊತ್ತ ನೀಡಿದ ಭಾರತ

ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್ ಗಳ ಬೃಹತ್ ಮೊತ್ತ ಪೇರಿಸಿದೆ...

ಮೊಹಾಲಿ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 392 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. 
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 392 ರನ್ ಗಳ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು. ಇದರೊಂದಿಗೆ ಶ್ರೀಲಂಕಾಗೆ ಗೆಲ್ಲಲು 393 ರನ್ ಗಳ ಗುರಿ ನೀಡಿದೆ. 
ಆರಂಭಿಕರಾದ ಶಿಖರ್ ಧವನ್ ಉತ್ತಮ ಆರಂಭ ಒದಗಿಸಿಕೊಟ್ಟರು 67 ಎಸೆತದಲ್ಲಿ 68 ರನ್ ಬಾರಿಸಿ ಔಟಾದರು. ನಂತರ ಜತೆಯಾದ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ 150ಕ್ಕೂ ರನ್ ಜತೆಯಾಟ ನೀಡಿದರು. ಭರ್ಜರಿಯಾಗಿ ಆಡುತ್ತಿದ್ದ ಶ್ರೇಯಸ್ ಅಯ್ಯರ್ 88 ರನ್ ಗಳಿಸಿದ್ದಾಗ ಔಟ್ ಆಗಿ ಪೆವಿಲಿಯನ್ ಸೇರಿದರು. ನಂತರ ಬಂದ ಮಾಜಿ ನಾಯಕ ಎಂಎಸ್ ಧೋನಿ 7 ರನ್ ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಔಟಾದರು. ಈ ಮಧ್ಯೆ ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 153 ಎಸೆತದಲ್ಲಿ 12 ಸಿಕ್ಸರ್, 13 ಬೌಂಡರಿ ಸೇರಿದಂತೆ ಅಜೇಯ 208 ರನ್ ಸಿಡಿಸಿದರು. 
ಶ್ರೀಲಂಕಾ ಪರ ಪೆರೇರಾ 3 ಹಾಗೂ ಪತಿರನಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ