ರೋಹಿತ್ ಶರ್ಮಾ 
ಕ್ರಿಕೆಟ್

ರೋಹಿತ್ ಶರ್ಮಾ ಭರ್ಜರಿ ದ್ವಿಶತಕ, 3ನೇ ದ್ವಿಶತಕ ಬಾರಿಸಿ ದಾಖಲೆ

ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ...

ಮೊಹಾಲಿ: ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. 
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿ 3ನೇ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 
ಸ್ಫೋಟಕ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 153 ಎಸೆತದಲ್ಲಿ 12 ಸಿಕ್ಸರ್, 13 ಬೌಂಡರಿ ಸೇರಿದಂತೆ ಅಜೇಯ 208 ರನ್ ಸಿಡಿಸಿದರು. ಮೊದಲ 100 ರನ್ 115 ಎಸತೆಗಳನ್ನು ತೆಗೆದುಕೊಂಡಿದ್ದ ರೋಹಿತ್ ಶರ್ಮಾ ನಂತರದ ಶತಕವನ್ನು ಕೇವಲ 36 ಎಸೆತಗಳಲ್ಲಿ ಸಿಡಿಸಿದ್ದಾರೆ.
ಇನ್ನು ರೋಹಿತ್ ಶರ್ಮಾ ವೈಯಕ್ತಿಕ ಗರಿಷ್ಠ ರನ್ ಅನ್ನು ಲಂಕಾ ವಿರುದ್ಧವೇ ಬಾರಿಸಿದ್ದರು. ಕೊಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದಿದ್ದ ಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 264 ರನ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!