ಅಜಿಂಕ್ಯ ರೆಹಾನೆ 
ಕ್ರಿಕೆಟ್

ಕಾರು ಅಪಘಾತ: ಕ್ರಿಕೆಟಿಗ ಅಜಿಂಕ್ಯ ರೆಹಾನೆ ತಂದೆ ಬಂಧನ

ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರೆಹಾನೆ ಅವರ ತಂದೆ ಮಧುಕರ್ ಬಾಬುರಾವ್ ಅವರನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರೆಹಾನೆ ಅವರ ತಂದೆ ಮಧುಕರ್ ಬಾಬುರಾವ್ ಅವರನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. 
ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಮಧುಕರ್ ಬಾಬುರಾವ್, 67 ವರ್ಷದ ವೃದ್ಧೆಗೆ ಡಿಕ್ಕಿ ಹೊಡೆದಿದ್ದು, ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ತಕ್ಷಣವೇ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ರೆಹಾನೆ ತಂದೆಯ ವಿರುದ್ಧ ಅಜಾಗರೂಕ ಚಾಲನೆಯಿಂದ ಸಾವು ಸಂಭವಿಸುವಂತೆ ಮಾಡಿರುವ ಆರೋಪದ ಅಡಿಯಲ್ಲಿ ಐಪಿಸಿ ಕಾಯ್ದೆ 304ಎ, 337, 338, 279 ಹಾಗೂ 184 ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. 
ರೆಹಾನೆ ತಂದೆಯವರ ಕಾರು ಅಪಘಾತಕ್ಕೀಡಾದಾಗ ಯಾರು ಕಾರನ್ನು ಚಾಲನೆ ಮಾಡುತ್ತಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಜಿಂಕ್ಯ ರೆಹಾನೆ ರಜೆಯಲ್ಲಿದ್ದು, ಅವರ ಕುಟುಂಬ ಸದಸ್ಯರು ಕೊಂಕಣಕ್ಕೆ ತೆರಳುತ್ತಿದ್ದಾಗ ಈ ಅಘಪಾತ ಸಂಭವಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!