ಶಿಖರ್ ಧವನ್ 
ಕ್ರಿಕೆಟ್

ಏಕದಿನ ಸರಣಿ: ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್ ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ...

ವಿಶಾಖಪಟ್ಟಣ: ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಶಿಖರ್ ಧವನ್(100) ಅಮೋಘ ಶತಕ ಹಾಗೂ ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕ(65)ದ ನೆರವಿನೊಂದಿಗೆ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. 
ಡಾ.ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಟೀಂ ಇಂಡಿಯಾ, ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 215 ರನ್ ಗಳಿಗೆ ತನ್ನ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಸರಣಿ ಗೆಲ್ಲಲು 216ರನ್ ಗಳು ಗುರಿ ಬೆನ್ನತ್ತಿದ ಭಾರತ, ಧವನ್ ಶತಕ ಹಾಗೂ ಅಯ್ಯರ್ ಸಮಯೋಚಿತ ಅರ್ಧಶತಕದ ನೆರವಿನಿಂದ 32.1 ಓವರ್‌ಗಳಲ್ಲೇ ಎರಡು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.
ಭಾರತ ಪರ ರೋಹಿತ್‌ ಶರ್ಮಾ 7, ಧವನ್ ಅಜಯ 100 ರನ್‌, ಶ್ರೇಯಸ್ ಅಯ್ಯರ್ 65, ಕಾರ್ತಿಕ್ ಅಜಯ 26 ರನ್‌ ಗಳಿಸಿದರು.

ಶ್ರೀಲಂಕಾ ಪರ ಧನಂಜಯ, ಪೆರೆರಾ ತಲಾ 1 ವಿಕೆಟ್‌ ಪಡೆದರು.
ಲಂಕಾಗೆ ಆರಂಭಿಕ ಆಘಾತ ಎದುರಾದರು ಉಪುಲ್ ತರಂಗ ಹಾಗೂ ಸಮರವಿಕ್ರಮ 121 ರನ್ ಗಳ ಜತೆಯಾಟ ನೀಡಿದ್ದು ತಂಡ ಬೃಹತ್ ಮೊತ್ತ ಕಲೆಹಾಕುವ ಸೂಚನೆ ನೀಡಿತ್ತು. ಆದರೆ ಯಜುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಮಾರಕ ದಾಳಿಗೆ ಲಂಕಾ ಪಡೆ ತತ್ತರಿಸಿತು. 
ಲಂಕಾ ಪರ ಗುಣತಿಲಕ 13, ಉಪುಲ್ ತರಂಗ 95, ಸಮರವಿಕ್ರಮ 42, ಮ್ಯಾಥ್ಯೂಸ್ 17, ಡಿಕ್ವೇಲ್ಲಾ 8, ಗುಣರತ್ನೆ 17, ಪೆರೇರಾ 6 ರನ್ ಗಳಿಸಿ ಔಟಾದರು. 
ಭಾರತ ಪರ ಯಜುವೇಂದ್ರ ಚಹಾಲ್ ಹಾಗೂ ಕುಲದೀಪ್ ಯಾದವ್ ತಲಾ 3, ಹಾರ್ದಿಕ್ ಪಾಂಡ್ಯ 2, ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!