ಟಿ20 ಕ್ರಿಕೆಟ್ ನಲ್ಲಿ ಭಾರತೀಯ ಆಟಗಾರನಾಗಿ ವೇಗದ ಶತಕ ಸಿಡಿಸಿದ ಖ್ಯಾತಿಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.
ಇಂದೋರ್ ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 35 ಎಸೆತಗಳಲ್ಲಿ ಭರ್ಜರಿ 8 ಸಿಕ್ಸ್ ಹಾಗೂ 11 ಬೌಂಡರಿ ಸೇರಿದಂತೆ 101 ರನ್ ಸಿಡಿಸಿ ಎರಡನೇ ಟಿ20 ಶತಕ ಬಾರಿಸಿ ಸಂಭ್ರಮಿಸಿದರು.
ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ 118 ರನ್ ಗಳಿಸಿದ್ದಾಗ ಚಮೇರಾ ಎಸೆತದಲ್ಲಿ ಧನಂಜಯಾಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.
ಟಿ20 ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಡೇವಿಡ್ ಮಿಲ್ಲರ್ ಬಾಂಗ್ಲಾದೇಶದ ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿದ್ದು ಇದೀಗ ರೋಹಿತ್ ಶರ್ಮಾ ಸಹ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.