ವಿರಾಟ್ ಕೊಹ್ಲಿ-ಎಬಿಡಿ ವಿಲಿಯರ್ಸ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾಗೆ ಬಂದರೆ ದಾಖಲೆ ಬರೆಯುವುದು ಖಂಡಿತ ಎಂದು ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಎಬಿಡಿ ವಿಲಿಯರ್ಸ್ ಮುಂಬರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಬಹುದು. ಕೊಹ್ಲಿ ಬಗ್ಗೆ ನನಗೆ ತಿಳಿದಿದೆ. ಕೊಹ್ಲಿಯ ನಾಯಕತ್ವದ ಬಗ್ಗೆಯೂ ನಮಗೆ ಹರಿವಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ತಂಡವನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ ಎಂದು ಹೇಳಿದರು.
ನಮ್ಮ ನೆಲದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನವನ್ನು ನೀಡಿದೆ. ನಮ್ಮ ಪರಿಸ್ಥಿತಿಗೆ ಬಹುಬೇಗ ಒಗ್ಗಿಕೊಳ್ಳುತ್ತಾರೆ. ಜಗತ್ತಿನ ಅಗ್ರ ಟೆಸ್ಟ್ ತಂಡವಾಗಲು ದಕ್ಷಿಣ ಆಫ್ರಿಕಾವು ಟೀಂ ಇಂಡಿಯಾವನ್ನು ಮೀರಿಸಲು ಪ್ರಯತ್ನಿಸುತ್ತದೆ. ಜಗತ್ತಿನ ನಂಬರ್ 1 ಸ್ಥಾನ ಪಡೆಯಲು ನಾವು ಪ್ರಯತ್ನಿಸುತ್ತೇವೆ. ಅಂಕಗಳಿಗೆ ಹೋಲಿಸಿದರೇ ನಾವು ತುಂಬಾ ದೂರದಲ್ಲಿಲ್ಲ. ನಾವು ಮುಂದಿನ ಎರಡು ಅಥವಾ ಮೂರು ತಿಂಗಳುಗಳಲ್ಲಿ ಸರಣಿಗಳನ್ನು ಗೆದ್ದರೆ ನಂಬರ್ 1 ಸ್ಥಾನವನ್ನು ಸಾಧಿಸಬಹುದು ಎಂದು ಹೇಳಿದರು.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಸತತ 9 ಟೆಸ್ಟ್ ಸರಣಿಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಇನ್ನು ಜನವರಿ 5ರಿಂದ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಪ್ರಾರಂಭವಾಗಲಿದ್ದು ಈ ಟೆಸ್ಟ್ ಸರಣಿ ಗೆಲುವಿನೊಂದಿಗೆ ದಾಖಲೆ ನಿರ್ಮಿಸುತ್ತಾರೆ ಎಂದು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics