ದುಬೈ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ ಬೌಲರ್ ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ನಡುವೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೆಸ್ಟ್ ನಂಬರ್ 1 ಬೌಲರ್ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.
ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಒಂದು ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಯಾರು ಶ್ರೇಷ್ಠ ಬೌಲಿಂಗ್ ನಿರ್ವಹಣೆ ತೋರುತ್ತಾರೋ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ 1 ಸ್ಥಾನಕ್ಕೇರುತ್ತಾರೆ.
ಆರ್ ಅಶ್ವಿನ್ ಪ್ರಸ್ತುತ ನಂಬರ್ 1 ಸ್ಥಾನದಲ್ಲಿದ್ದಾರೆ. ಆದರೆ ಜಡೇಜಾರಿಗಿಂತ ಕೇವಲ 8 ಪಾಯಿಂಟ್ ಗಳಿಂದ ಮುಂದಿದ್ದಾರೆ. ಅಶ್ವಿನ್ 887 ಅಂಕ ಮತ್ತು ಜಡೇಜಾ 879 ಅಂಕ ಪಡೆದು ಐಸಿಸಿ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಎರಡು ಸ್ಥಾನಗಳಲ್ಲಿದ್ದಾರೆ.