ಹೈದರಾಬಾದ್: ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ.
ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭಿಕರಾಗಿ ಕಣಕ್ಕೀಳಿದ ಕೆಎಲ್ ರಾಹುಲ್ 2 ರನ್ ಗೆ ಔಟ್ ಆಗಿ ನಿರಾಸೆ ಮೂಡಿಸಿದರೆ, ಮುರುಳಿ ವಿಜಯ್ ಶತಕ ಸಿಡಿಸಿದ್ದಾರೆ. 156 ಎಸೆತಗಳಲ್ಲಿ ಮುರಳಿ ವಿಜಯ್ 108 ರನ್ ಗಳಿಸಿದ್ದು ಟೀಂ ಇಂಡಿಯಾ ಉತ್ತಮ ಸ್ಥಿತಿ ಕಾಯ್ದುಕೊಂಡಿದೆ.
ಪ್ರಸ್ತುತ 74 ಓವರ್ ಮುಕ್ತಾಯಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 266 ರನ್ ಗಳಿಸಿದೆ. ಭಾರತ ಪರ ವಿರಾಟ್ ಕೊಹ್ಲಿ ಅಜೇಯ 56 ರನ್ ಮತ್ತು ರಹಾನೆ ಅಜೇಯ 10 ರನ್ ಗಳಿಸಿ ಆಡುತ್ತಿದ್ದಾರೆ.
ಬಾಂಗ್ಲಾದೇಶ ಪರ ಟಸ್ಕಿನ್ ಅಹಮ್ಮದ್, ಹಸನ್ ಮಿರ್ಝಾ, ತೈಜುಲ್ ಇಸ್ಲಾಂ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics