ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ನಾಯಕತ್ವದಲ್ಲಿ ಸತತ ಆರು ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ

ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸತತ ಆರು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ...

ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸತತ ಆರು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ. 
ಮಹೇಂದ್ರ ಸಿಂಗ್ ಧೋನಿ ನಾಯಕ್ವತದಲ್ಲಿ 2014ರ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಸೋತಿತ್ತು. ಇದಾದ ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡರು. ತಮ್ಮ ನಾಯಕತ್ವದ ಮೊದಲ ಟೆಸ್ಟ್ ಸರಣಿ 2015ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದು ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ 3-0 ಅಂತರದಿಂದ ಸರಣಿ ಜಯಿಸಿದರು. ಅಲ್ಲಿಂದ ಸೋಲಿನ ಕಡೆ ಮುಖ ಮಾಡಿಲ್ಲ. 
ನಂತರ ಶ್ರೀಲಂಕಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆತಿಥೇಯರನ್ನು 2-1 ಅಂತರದಿಂದ ಸೋಲಿಸಿ ಸರಣಿ ಜಯಗಳಿಸಿದರು. ಬಳಿಕ ವೆಸ್ಟ್ ಇಂಡೀಸ್ ಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ ಅಲ್ಲಿ 2-0 ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಸರಣಿ ಗೆದ್ದಿತು. 
ಇದಾದ ಬಳಿಕ 2016ರಲ್ಲಿ ಭಾರತ ಪ್ರವಾಸ ಕೈಗೊಂಡ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿತು. ಬಳಿಕ ಇಂಗ್ಲೆಂಡ್ ತಂಡದ ಐದು ಟೆಸ್ಟ್ ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಭಾರತ ಸರಣಿ ಗೆದ್ದಿತು. ಬಳಿಕ ಬಾಂಗ್ಲಾದೇಶ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸತತ ಆರನೇ ಬಾರಿಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡ ಸರಣಿ ಗೆದ್ದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!