ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳ ಪೈಕಿ ಮೊದಲೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಫೆಬ್ರವರಿ 23ರಿಂದ ಮಾರ್ಚ್ 29ರವರೆಗೆ ನಾಲ್ಕು ಟೆಸ್ಟ್ ಪಂದ್ಯಗಳು ಆಸ್ಟ್ರ್ಲೇಲಿಯಾ ಮತ್ತು ಭಾರತ ನಡುವೆ ನಡೆಯಲಿದೆ. ಮೊದಲ ಪಂದ್ಯ ಪುಣೆಯಲ್ಲಿ ಪ್ರಾರಂಭಗೊಳ್ಳಲಿದೆ.
ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಂಜಿಕ್ಯಾ ರಹಾನೆ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್, ಅಭಿನವ್ ಮುಕುಂದ್, ಹಾರ್ದಿಕ್ ಪಾಂಡ್ಯಾ ಮತ್ತು ಕುಲ್ದೀಪ್ ಯಾದವ್ ಸ್ಥಾನಪಡೆದಿದ್ದಾರೆ.
ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 23-27 ಪುಣೆ.
ದ್ವಿತೀಯ ಟೆಸ್ಟ್ ಪಂದ್ಯ ಮಾರ್ಚ್ 4-8 ಬೆಂಗಳೂರು.
ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 16-20 ರಾಂಚಿ.
ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 25-29 ಧರ್ಮಶಾಲಾ.