ಮಿಚೆಲ್ ಸ್ಟಾರ್ಕ್ 
ಕ್ರಿಕೆಟ್

ಆರ್‌ಸಿಬಿಗೆ ಆಘಾತ: ಪ್ರಸಕ್ತ ಆವೃತ್ತಿಯಲ್ಲಿ ತಂಡದಿಂದ ದೂರ ಉಳಿಯಲು ಮಿಚೆಲ್ ಸ್ಟಾರ್ಕ್ ನಿರ್ಧಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗಿ ಮಿಚೆಲ್ ಸ್ಟಾರ್ಕ್ 2017ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ...

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ವೇಗಿ ಮಿಚೆಲ್ ಸ್ಟಾರ್ಕ್ 2017ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ. 
2017ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಹರಾಜು ಪ್ರಕ್ರಿಯೆಗೆ ಒಂದು ದಿನ ಬಾಕಿ ಇರುವಾಗಲೇ ಮಿಚೆಲ್ ಸ್ಟಾರ್ಕ್ ಆರ್‌ಸಿಬಿ ತಂಡಕ್ಕೆ ಆಘಾತ ನೀಡಿದ್ದಾರೆ. 
ಫೆಬ್ರವರಿ 23ರಿಂದ ಆಸ್ಟ್ರೇಲಿಯಾ ಭಾರತ ಪ್ರವಾಸ ಕೈಗೊಳ್ಳಲಿದ್ದು ಭಾರತ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಆಸೀಸ್ ತಂಡದ ಬೌಲಿಂಗ್ ನೇತೃತ್ವ ವಹಿಸಿಕೊಂಡಿರುವ ಸ್ಟಾರ್ಕ್ ಈ ಹಿಂದೆ 2014, 2015ರಲ್ಲಿ ಆರ್‌ಸಿಬಿ ತಂಡದ ಪರ ಆಡಿದ್ದರು. 
ಆದರೆ 2016ರ ಐಪಿಎಲ್ ಟೂರ್ನಿಯಲ್ಲಿ ಕಾಲಿನ ಗಾಯದಿಂದಾಗಿ ತಂಡದಿಂದ ದೂರ ಉಳಿದಿದ್ದರು. ಮಿಚೆಲ್ ಸ್ಟಾರ್ಕ್ ಗೆ ಆರ್‌ಸಿಬಿ 5 ಕೋಟಿ ರುಪಾಯಿ ಬಿಡ್ ಮಾಡಿ ಖರೀದಿಸಿತ್ತು. ಇದೀಗ ಆರ್‌ಸಿಬಿ ಖಾತೆಗೆ ಹೆಚ್ಚುವರಿ 5 ಕೋಟಿ ರುಪಾಯಿ ಉಳಿದಿದ್ದು ಬೇರೆ ವಿದೇಶಿ ಆಟಗಾರನನ್ನು ಖರೀದಿಸಲು ಅವಕಾಶ ಸಿಕ್ಕಂತಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!