ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ವೇಗದ ದ್ವಿಶತಕ ಸಿಡಿಸಿದ ಶ್ರೇಯಸ್ ಅಯ್ಯರ್

Vishwanath S
ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಎ ತಂಡದ ಆಟಗಾರ ಶ್ರೇಯಸ್ ಅಯ್ಯರ್ ಅಮೋಘ ದ್ವಿಶತಕ ಸಿಡಿಸಿದ್ದಾರೆ. 
ಮುಂಬೈನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 210 ಎಸೆತಗಳಲ್ಲಿ ಅಜೇಯ 202 ರನ್ ಸಿಡಿಸಿದ್ದಾರೆ. ಇದರಲ್ಲಿ 7 ಸಿಕ್ಸರ್ ಹಾಗೂ 27 ಬೌಂಡರಿಗಳನ್ನು ಸಿಡಿಸಿದ್ದಾರೆ. 
ಭಾರತ ಎ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 7 ವಿಕೆಟ್ ನಷ್ಟಕ್ಕೆ 469 ರನ್ ಸಿಡಿಸಿತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಮೊದಲ ಆಘಾತ ಅನುಭವಿಸಿತು. ಆದರೆ ಪಂದ್ಯದಲ್ಲಿ ದಿಟ್ಟ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ 202 ರನ್ ಸಿಡಿಸಿದ್ದು ತಂಡ 403 ರನ್ ಗಳಿಸಿತು ಸಾಧ್ಯವಾಯಿತು. 
ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿರುವ ಆಸ್ಟ್ರೇಲಿಯಾ 2 ವಿಕೆಟ್ ನಷ್ಟಕ್ಕೆ 59 ರನ್ ಗಳಿಸಿದ್ದು 125 ರನ್ ಮುನ್ನಡೆ ಸಾಧಿಸಿದೆ. 
SCROLL FOR NEXT