ಅನಿಲ್ ಕುಂಬ್ಳೆ-ವಿರಾಟ್ ಕೊಹ್ಲಿ 
ಕ್ರಿಕೆಟ್

ಕುಂಬ್ಳೆ ಆಕ್ರಮಣಶೀಲ ಪ್ರವೃತ್ತಿ ಮುಂದುವರೆಸೆಂದು ಸಲಹೆ ನೀಡಿದ್ದಾರೆ: ಕೊಹ್ಲಿ

ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರು ನನ್ನ ಆಕ್ರಮಣಶೀಲ ಪ್ರವೃತ್ತಿಯನ್ನು ಮುಂದುವರೆಸು ಎಂದು ಸಲಹೆ ನೀಡಿದ್ದಾರೆ ಎಂದು ತಂಡದ ನಾಯಕ...

ಪುಣೆ: ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರು ನನ್ನ ಆಕ್ರಮಣಶೀಲ ಪ್ರವೃತ್ತಿಯನ್ನು ಮುಂದುವರೆಸು ಎಂದು ಸಲಹೆ ನೀಡಿದ್ದಾರೆ ಎಂದು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ನೈಸರ್ಗಿಕ ಆಕ್ರಮಣಶೀಲತೆ ನಿನ್ನ ವೈಯಕ್ತಿಕ ಮತ್ತು ಕ್ರಿಕೆಟ್ ಬದುಕನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಅನಿಲ್ ಬಾಯ್ ಅವರು ಸಲಹೆ ನೀಡಿದ್ದಾರೆ ಎಂದು ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 
ಅನಿಲ್ ಕುಂಬ್ಳೆ ಅವರು ತಮ್ಮ ತಲೆಯಲ್ಲಿ ಇನ್ನು ಆಕ್ರಮಣಶೀಲ ಪ್ರವೃತ್ತಿಯನ್ನು ಹೊಂದಿದ್ದಾರೆ. ಅದನ್ನು ಯಾವ ಸಂದರ್ಭದಲ್ಲಿ ಯಾವ ರೀತಿಯಲ್ಲಿ ತೋರಿಸಬೇಕು ಎಂಬುದು ಗೊತ್ತು. ಅವರ ಈ ನಡೆ ನನಗೆ ಸಹಾಯ ಮಾಡುತ್ತದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಕುಂಬ್ಳೆ ಅವರು ಸ್ಪಿನ್ ಬೌಲರ್ ಆದರೂ ವಿಕೆಟ್ಗಳನ್ನು ಪಡೆಯಲು ವೇಗಿಯಂತೆ ಆಕ್ರಮಣಶೀಲತೆಯನ್ನು ಪ್ರದರ್ಶಿಸುತ್ತಾರೆ. ಇದರಿಂದಾಗಿಯೇ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ 619 ವಿಕೆಟ್ ಗಳನ್ನು ಪಡೆದಿರುವ ಸಾಧನೆ ಮಾಡಿದ್ದಾರೆ ಎಂದು ವಿರಾಟ್ ಕುಂಬ್ಳೆಯನ್ನು ಹೊಗಳಿದ್ದಾರೆ. 
ಆಸ್ಟ್ರೇಲಿಯಾ ತಂಡದ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯ ಪುಣೆಯಲ್ಲಿ ನಾಳೆಯಿಂದ ಆರಂಭಗೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?