ಆರ್ ಅಶ್ವಿನ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಕಪಿಲ್ ದೇವ್ ದಾಖಲೆ ಮುರಿದ ಆರ್ ಅಶ್ವಿನ್!

ಉತ್ತಮ ಪ್ರದರ್ಶನದ ಮೂಲಕ ದಾಖಲೆಗಳನ್ನು ಹಿಂದಿಕ್ಕುತ್ತಿರುವ ಭಾರತದ ಸ್ಪಿನ್ ಅಸ್ತ್ರ ಆರ್ ಅಶ್ವಿನ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, 1980ರಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

ಪುಣೆ: ಉತ್ತಮ ಪ್ರದರ್ಶನದ ಮೂಲಕ ದಾಖಲೆಗಳನ್ನು ಹಿಂದಿಕ್ಕುತ್ತಿರುವ ಭಾರತದ ಸ್ಪಿನ್ ಅಸ್ತ್ರ ಆರ್ ಅಶ್ವಿನ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, 1980ರಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರ  ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.

ಸ್ವದೇಶದಲ್ಲಿ ನಡೆದ ಟೆಸ್ಟ್ ಸರಣಿಗಳಲ್ಲಿ ಕಪಿಲ್ ದೇವ್ 63 ವಿಕೆಟ್ ಗಳನ್ನು ಪಡೆದಿದ್ದರು. ನಿನ್ನೆ 2 ವಿಕೆಟ್ ಪಡೆದಿದ್ದ ಅಶ್ವಿನ್ ಸ್ವದೇಶದಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 62ಕ್ಕೇರಿಸಿಕೊಳ್ಳುವ ಮೂಲಕ ಕಪಿಲ್ ದೇವ್ ದಾಖಲೆಯನ್ನು  ಸರಿಗಟ್ಟಿದ್ದರು. ಆದರೆ ಇಂದು ಆಸ್ಟ್ರೇಲಿಯಾ ತಂಡದ ಸ್ಟ್ರಾರ್ಕ್ ಅವರನ್ನು ಔಟ್ ಮಾಡುವ ಮೂಲಕ ಸ್ವದೇಶದಲ್ಲಿ ತಮ್ಮ ವಿಕೆಟ್ ಗಳಿಕೆಯನ್ನು 63ಕ್ಕೆ ಏರಿಸಿಕೊಳ್ಳುವ ಮೂಲಕ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ ದಾಖಲೆಯನ್ನು  ಅಶ್ವಿನ್ ಹಿಂದಿಕ್ಕಿದ್ದಾರೆ.

ಕುಂಬ್ಳೆ ದಾಖಲೆ ಮುರಿಯಲು ಇನ್ನೊಂದೇ ವಿಕೆಟ್ ಬಾಕಿ
ಇನ್ನು ಪಟ್ಟಿಯಲ್ಲಿ ಸ್ವದೇಶದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಅಗ್ರ ಸ್ಥಾನದಲ್ಲಿದ್ದು, ಕುಂಬ್ಳೆ ಸ್ವದೇಶದಲ್ಲಿ ನಡೆದ ಟೆಸ್ಟ್ ಸರಣಿಗಳಲ್ಲಿ ಒಟ್ಟು 64 ವಿಕೆಟ್ ಕಬಳಿಸಿದ್ದಾರೆ. ಇನ್ನು  ಅಶ್ವಿನ್ ಕೂಡ ಈ ದಾಖಲೆಯನ್ನು ಸರಿಗಟ್ಟಿದ್ದು, ಅವರೂ ಕೂಡ 64 ವಿಕೆಟ್ ಗಳಿಸಿದ್ದಾರೆ. ಅಶ್ವಿನ್ ಇನ್ನೊಂದು ವಿಕೆಟ್ ಪಡೆದರೂ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿ ಸ್ವದೇಶದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ  ಕೀರ್ತಿಗೆ ಅಶ್ವಿನ್ ಭಾಜನರಾಗುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್