ವಿರಾಟ್ ಕೊಹ್ಲಿ 
ಕ್ರಿಕೆಟ್

ಕಳೆದ 2 ವರ್ಷಗಳಲ್ಲೇ ನಮ್ಮದು ಅತ್ಯಂತ ಕಳಪೆ ಬ್ಯಾಟಿಂಗ್: ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಟೀಂ ಇಂಡಿಯಾ...

ಪುಣೆ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು, ಕಳೆದ ಎರಡು ವರ್ಷಗಳಲ್ಲೇ ನಮ್ಮದು ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ಎಂದಿದ್ದಾರೆ.
ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕೇವಲ 107 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ಸ್ಮಿತ್ ಪಡೆ ವಿರುದ್ಧ ಬರೊಬ್ಬರಿ 333 ರನ್ ಗಳ ಹೀನಾಯ ಸೋಲು ಕಂಡಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರಾಟ್ ಕೊಹ್ಲಿ, ಕಳೆದ ವರ್ಷಗಳಲ್ಲೇ ಇದು ಅತ್ಯಂತ ಕಳಪೆ ಬ್ಯಾಟಿಂಗ್, ಮೂರು ದಿನಗಳಿಂದ ನಾವು ಮಾಡಿದ ಪ್ರಯತ್ನ ಸಾಕಾಗಲಿಲ್ಲ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎಂಬುದುನ್ನು ತಿಳಿಯಬೇಕಾಗಿದೆ ಎಂದರು.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಭಾರತದ ವಿರುದ್ಧ 1-0 ಮುನ್ನಡೆ ಸಾಧಿಸಿದ್ದು, ಸರಣಿಯ ಮುಂದಿನ ಪಂದ್ಯವು ಮಾರ್ಚ್ 4ರಿಂದ 8ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!