ಪುಣೆ: ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 333 ರನ್ ಗಳ ಹೀನಾಯ ಸೋಲು ಕಂಡಿರುವ ಬಗ್ಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸೋಲಿಗೆ ಬ್ಯಾಟ್ಸ್ ಮನ್ ಗಳ ನಿರ್ಲಕ್ಷ್ಯವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೋಹ್ಲಿ ನೇತೃತ್ವದ ಪಡೆಯಿಂದ ಕಳಪೆ ಹೋರಾಟವನ್ನೂ ಸುನಿಲ್ ಗವಾಸ್ಕರ್ ಟೀಕಿಸಿದ್ದು, ಟೀ ವಿರಾಮದ ನಂತರ ಕೇವಲ ಅರ್ಧಗಂಟೆಯಲ್ಲೇ ಪಂದ್ಯ ಮುಕ್ತಾಯಗೊಳಿಸಿದ್ದು ನಿಜಕ್ಕೂ ನಂಬಲು ಸಾಧ್ಯವಾಗಲಿಲ್ಲ. ಭಾರತೀಯ ತಂಡ ಪಂದ್ಯವನ್ನು ಸ್ವಲ್ಪ ನಿರ್ಲಕ್ಷಿಸಿತು. ವಿಕೆಟ್ ಉಳಿಸಿಕೊಳ್ಳುವುದರ ಅಗತ್ಯತೆಯನ್ನು ಭಾರತೀಯ ತಂಡದ ಬ್ಯಾಟ್ಸ್ ಮನ್ ಗಳು ಅರ್ಥಮಾಡಿಕೊಳ್ಳಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
2 ವರೆ ದಿನದಲ್ಲಿ ಟೆಸ್ಟ್ ಪಂದ್ಯವನ್ನು ಭಾರತ ಸೋತಿರುವುದನ್ನು ನೆನಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಆಸ್ಟ್ರೇಲಿಯಾದ ಬೌಲರ್ ಗಳ ಸ್ಪಿನ್ ನ್ನು ಭಾರತೀಯ ಬ್ಯಾಟ್ಸ್ ಮನ್ ಗಳು ಎದುರಿಸಲಾಗದೇ ಇದ್ದದ್ದು ನಿಜಕ್ಕೂ ಅಚ್ಚರಿಯ ವಿಷಯವಾಗಿತ್ತು. ಭಾರತ ತಂಡದ ಕಳಪೆ ಪ್ರದರ್ಶನದ ಬಗ್ಗೆ ಬೇಸರವಾಗಿದೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics