ಸಂಗ್ರಹ ಚಿತ್ರ 
ಕ್ರಿಕೆಟ್

ನಾಯಕತ್ವಕ್ಕೆ ಧೋನಿ ವಿದಾಯ; ಕೂಲ್ ಕ್ಯಾಪ್ಟನ್ ಗೆ ಬಿಸಿಸಿಐ ವಿಡಿಯೋ ಗೌರವ!

ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಗೆ ವಿಡಿಯೋ ಮೂಲಕ ಗೌರವ ಸಮರ್ಪಣೆ ಮಾಡಿದೆ.

ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕತ್ವಕ್ಕೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ ಅವರ ನಿರ್ಧಾರಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿರುವಂತೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)  ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಗೆ ವಿಡಿಯೋ ಮೂಲಕ ಗೌರವ ಸಮರ್ಪಣೆ ಮಾಡಿದೆ.

ಧೋನಿ ಕ್ರಿಕೆಟ್ ಪದಾರ್ಪಣೆ ಮಾಡಿದ ದಿನದಿಂದ ತನ್ನ ಕ್ರಿಕೆಟ್ ಜೀವನದಲ್ಲಿ ಸಾಧಿಸಿದ ಸರಣಿ ವಿಜಯಗಳು ಹಾಗೂ ಕ್ರಿಕೆಟ್ ನಲ್ಲಿನ ಅವರ ಅಪರೂಪದ ಕ್ಷಣಗಳನ್ನು ಸೇರಿಸಿ ವಿಡಿಯೋ ಮಾಡಿ ಅದನ್ನು ತನ್ನ ಟ್ವಿಟರ್ ಖಾತೆಯಲ್ಲಿ  ಹಂಚಿಕೊಂಡಿದೆ. ಬಿಸಿಸಿಐನ ಈ ನೂತನ ವಿಡಿಯೋಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ. ಅಂತೆಯೇ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗರೂ  ಕೂಡ ಈ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.

35 ವರ್ಷ ವಯಸ್ಸಿನ ಧೋನಿ ನಾಯಕತ್ವಕ್ಕೆ ವಿದಾಯ ಹೇಳಿದ್ದರೂ, ತಂಡದಲ್ಲಿ ವಿಕೆಟ್‌ ಕೀಪರ್–ಬ್ಯಾಟ್ಸ್‌ಮನ್ ಆಗಿ ಮುಂದುವರಿಯಲಿದ್ದಾರೆ. ಇದೇ ಜನವರಿ15ರಿಂದ ಇಂಗ್ಲೆಂಡ್ ತಂಡದ ಎದುರು ಆರಂಭವಾಗಲಿರುವ ಏಕದಿನ  ಕ್ರಿಕೆಟ್ ಸರಣಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಧೋನಿ ತಮ್ಮ ಅದೃಷ್ಟದ ನಂಬರ್ 4ರ ಸ್ಥಾನದಲ್ಲಿ ಅಡುವ ಸಾಧ್ಯತೆ ಇದೆ. ಧೋನಿ ನಾಯಕತ್ವಕ್ಕೆ ವಿದಾಯ ಹೇಳಿರುವುದರಿಂದ ಮುಂದಿನ ಸರಣಿಯಲ್ಲಿ ಭಾರತ  ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುವ ಸಾಧ್ಯತೆಗಳಿವೆ.

ಭಾರತ ಕ್ರಿಕೆಟ್‌ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಧೋನಿ ಒಬ್ಬರಾಗಿದ್ದು, ಅವರ ನೇತೃತ್ವದಲ್ಲಿ ಭಾರತ ತಂಡವು 2007ರ ಟ್ವೆಂಟಿ-20 ವಿಶ್ವಕಪ್, 2011ರ ಐಸಿಸಿ ಏಕದಿನ ವಿಶ್ವಕಪ್ ಮತ್ತು 2013ರಲ್ಲಿ ಐಸಿಸಿ  ಚಾಂಪಿಯನ್ಸ್‌ ಟ್ರೋಫಿ ಗೆದ್ದಿತ್ತು. 2014ರ ಡಿಸೆಂಬರ್‌ನಲ್ಲಿ ಧೋನಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಧೋನಿ ಒಟ್ಟು 283 ಏಕದಿನ ಪಂದ್ಯಗಳನ್ನು ಆಡಿ, 9,110 ರನ್‌ಗಳನ್ನು ಪೇರಿಸಿದ್ದಾರೆ. ಅದರಲ್ಲಿ  9  ಶತಕಗಳು ಮತ್ತು 61  ಅರ್ಧಶತಕಗಳು ಸೇರಿವೆ. ವಿಕೆಟ್‌ ಕೀಪಿಂಗ್‌ನಲ್ಲಿ ಅವರು 267 ಕ್ಯಾಚ್ ಮತ್ತು 92 ಸ್ಟಂಪಿಂಗ್ ಮಾಡಿದ್ದಾರೆ. 73 ಟಿ-20 ಪಂದ್ಯಗಳನ್ನು ಆಡಿರುವ ಎಂಎಸ್'ಡಿ 1,112  ರನ್‌ಗಳನ್ನು ಸಿಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ