ವಿರಾಟ್ ಕೊಹ್ಲಿ 
ಕ್ರಿಕೆಟ್

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆ ನೋಡುತ್ತಾ ಸುಮ್ಮನಿರುವುದು ಸರಿಯೇ?: ಕೊಹ್ಲಿ

ಬೆಂಗಳೂರಿನಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡನೀಯ. ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆ ಅಲ್ಲಿದ್ದವರು ಏನು ಮಾಡದೇ...

ಬೆಂಗಳೂರಿನಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡನೀಯ. ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆ ಅಲ್ಲಿದ್ದವರು ಏನು ಮಾಡದೇ ನೋಡಿಕೊಂಡು ಕೈಕಟ್ಟಿ ಕುಳಿತುಕೊಂಡಿದ್ದರು ಇದು ಎಷ್ಟು ಸರಿ ಎಂದು ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಪ್ರಶ್ನಿಸಿದ್ದಾರೆ.

ಯುವತಿಯರಿಗೆ ಕಿರುಕುಳ ನೀಡುತ್ತಿದ್ದರೆ ನೋಡಿಕೊಂಡು ಸುಮ್ಮನಿದ್ದ ನೀವು ನಿಮ್ಮ ಅಕ್ಕ-ತಂಗಿಗೆ ಹೀಗೆ ಕಿರುಕುಳ ನೀಡುತ್ತಿದ್ದರೆ ನೋಡಿಕೊಂಡು ಸುಮ್ಮನಿಸುತ್ತಿರಾ ಅಥವಾ ಅವರ ಸಹಾಯಕ್ಕೆ ಹೋಗುತ್ತಿರಾ ಎಂದು ಯುವಕರನ್ನು ಪ್ರಶ್ನಿಸಿದ್ದಾರೆ.

ಯುವತಿಯರು ಅವರಿಗೆ ಇಷ್ಟ ಬಂದ ಉಡುಪನ್ನು ಧರಿಸುವುದು ಅವರ ಇಷ್ಟ ಅದನ್ನು ನಾವು ಪ್ರಶ್ನೆ ಮಾಡುತ್ತಾ ಅದು ಸರಿ ಇದು ಸರಿ ಎಂದು ಪ್ರಶ್ನಿಸುವುದಕ್ಕಿಂತ ನಾಗರಿಕ ಸಮಾಜದಲ್ಲಿ ಇಂತಹ ವಿಷಯಗಳ ವಿರುದ್ಧ ಸಂಘಟಿತರಾಗದೇ ಇರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.



ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ರಾತ್ರಿ ನಡೆದ ಯುವತಿಯರ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ವಿರುದ್ಧ ಸೆಲೆಬ್ರಿಟಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!