ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ನಿನ್ನೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಇಂಗ್ಲೆಂಡ್ ವಿರುದ್ಧ ತ್ರಿಶತಕ ಸಿಡಿಸಿ ಮಿಂಚಿದ್ದ ಕರುಣ್ ನಾಯರ್ ಗೆ ಸ್ಥಾನ ಸಿಗಲಿಲ್ಲ.
ಇನ್ನು ಅಚ್ಚರಿಯ ಬೆಳವಣಿಗೆಯಲ್ಲಿ ಟೀಂ ಇಂಡಿಯಾದ ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ತಂಡವನ್ನು ಸೇರಿದ್ದಾರೆ. ಜತೆಗೆ ಸುರೇಶ್ ರೈನಾ, ಅಜಿಂಕ್ಯ ರಹಾನೆ ಸಹ ತಂಡಕ್ಕೆ ಸೇರಿರುವುದರಿಂದ ಕರುಣ್ ಗೆ ಅವಕಾಶ ಸಿಕ್ಕಿಲ್ಲ.
ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮನೀಷ್ ಪಾಂಡ್ಯೆ ಸದ್ಯ ಎರಡು ಮಾದರಿಗಳಿಗೂ ಆಯ್ಕೆಯಾಗಿದ್ದಾರೆ. ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ಶಿಖರ್ ಧವನ್ ಆರಂಭಿಕ ಜೋಡಿಯಾಗಿ ಕಣಕ್ಕಿಳಿದರೆ, ಟಿ20 ಪಂದ್ಯದಲ್ಲಿ ಮಂದೀಪ್ ಜತೆಯಾಗಲಿದ್ದಾರೆ.
ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೇ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ 303 ರನ್ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics