ಭಾರತದ ನೆಲದಲ್ಲಿ ಸಚಿನ್ ಬಳಿಕ 4 ಸಾವಿರ ರನ್ ಪೂರೈಸಿ ಧೋನಿ ಸಾಧನೆ
ಭಾರತದ ನೆಲದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ನಂತರ ನಾಲ್ಕು ಸಾವಿರ ರನ್ ಪೂರೈಸಿದ ಸಾಧನೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಾಡಿದ್ದಾರೆ...
ಭಾರತದ ನೆಲದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ನಂತರ ನಾಲ್ಕು ಸಾವಿರ ರನ್ ಪೂರೈಸಿದ ಸಾಧನೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಾಡಿದ್ದಾರೆ.
ಕಟಕನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಧೋನಿ 134 ರನ್ ಬಾರಿಸಿ ಈ ಮೈಲುಗಲ್ಲು ದಾಟಿದ್ದು, ಸ್ವದೇಶದಲ್ಲಿ ಈ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಸಚಿನ್ ತೆಂಡೂಲ್ಕರ್ 6979 ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದರೆ 3406 ರನ್ ಗಳಿಸಿರುವ ರಾಹುಲ್ ದ್ರಾವಿಡ್ ಮೂರನೇ ಸ್ಥಾನದಲ್ಲಿದ್ದಾರೆ.