ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ 
ಕ್ರಿಕೆಟ್

3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತಾ: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದಾರೆ. ಕಳೆದೆರಡು ಪಂದ್ಯಗಳಲ್ಲಿ ಅಷ್ಟೇನೂ ಉತ್ತಮವಲ್ಲದ ಪ್ರದರ್ಶನ ನೀಡಿರುವ ಶಿಖರ್  ಧವನ್ ರ ಬದಲಿಗೆ ಅಜಿಂಕ್ಯಾ ರಹಾನೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಂತೆಯೇ ಇಂಗ್ಲೆಂಡ್ ತಂಡದಲ್ಲಿಯೂ ಎರಡು ಬದಲಾವಣೆಗಳಾಗಿದ್ದು, ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿರುವ ಅಲೆಕ್ಸ್ ಹೇಲ್ಸ್ ಬದಲಿಗೆ ಬೇರ್  ಸ್ಟೋವ್ ಗೆ ಮತ್ತು ಜೋ ರೂಟ್ ಬದಲಿಗೆ ಬಿಲ್ಲಿಗ್ಸ್ ಗೆ ಸ್ಥಾನ ನೀಡಲಾಗಿದೆ.

3 ಪಂದ್ಯಗಳ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಲ್ಲಿ ಜಯಿಸಿದ್ದು, ಭಾರತದ ಪಾಲಿಗೆ ಅಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಆದರೆ ಇಂಗ್ಲೆಂಡ್ ಪಾಲಿಗೆ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿ ಸೋಲಿನ  ಅಂತರವನ್ನು ಕಡಿಮೆ ಮಾಡಿಕೊಳ್ಳುವ ತವಕ. ಇನ್ನು ಭಾರತ ತಂಡದ ನೂತನ ನಾಯಕ ವಿರಾಟ್ ಕೊಹ್ಲಿಗೆ ಇದು ನಾಯಕನಾಗಿ ಮೊದಲ ಸರಣಿಯಾಗಿದ್ದು, ಈ ಪಂದ್ಯವನ್ನೂ ಗೆದ್ದು ಕ್ಲೀನ್ ಸ್ವೀಪ್ ಮಾಡುವ ಮೂಲಕ ನಾಯಕತ್ವದಲ್ಲಿ  ಶುಭಾರಂಭ ಮಾಡುವ ಅಭಿಲಾಷೆ ಹೊಂದಿದ್ದಾರೆ.

ಭಾರತಕ್ಕೆ ಬ್ಯಾಟಿಂಗ್ ನಲ್ಲಿ ವಿರಾಟ್ ಕೊಹ್ಲಿ, ಧೋನಿ ಮತ್ತು ಕಳೆದ ಪಂದ್ಯದಲ್ಲಿ ಫಾರ್ಮ್ ಕಂಡುಕೊಂಡ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ಆಧಾರವಾಗಿದ್ದರೆ, ಬೌಲಿಂಗ್ ನಲ್ಲಿ ವಿಶ್ವದ ಅಗ್ರ ಸ್ಥಾನ ಹೊಂದಿರುವ ಸ್ಪಿನ್ನರ್  ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬೌಲಿಂಗ್ ನಲ್ಲಿ ಆಧಾರವಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ