ಬೆಂಗಳೂರು ಟಿ20 ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್
ಟೀಂ ಇಂಡಿಯಾ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಭಿಮಾನಿಗಳಿಗೆ ಭರ್ಜರಿ ಔತಣ ನೀಡಲು...
ಬೆಂಗಳೂರು: ಟೀಂ ಇಂಡಿಯಾ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಭಿಮಾನಿಗಳಿಗೆ ಭರ್ಜರಿ ಔತಣ ನೀಡಲು ಕ್ರೀಡಾಂಗಣ ರೆಡಿಯಾಗಿದೆ. ಈ ಮಧ್ಯೆ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಮುಗಿಬಿದ್ದಿದ್ದು ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.
ದುಬಾರಿ ಬೆಲೆಯ ಟಿಕೆಟ್ ಬೇಗನೆ ಖಾಲಿಯಾದ ಹಿನ್ನೆಲೆಯಲ್ಲಿ 500 ರು ಮತ್ತು 1250 ರುಪಾಯಿ ಮೌಲ್ಯದ ಟಿಕೆಟ್ ಗೆ ಬಾರಿ ಭಾರಿ ಬೇಡಿಕೆ ಕಂಡು ಬಂತು, ಬಿರುಬಿಸಿಲನ್ನೂ ಲೆಕ್ಕಿಸದೆ ಅಭಿಮಾನಿಗಳು 1 ಕಿಮೀ ಉದ್ದರ ಸರತಿ ಸಾಲಿನಲ್ಲಿ ನಿಂತು ಸಂಜೆವರೆಗೆ ಟಿಕೆಟ್ ಗೆ ಕಾದರು. ಕೆಲವರಿಗೆ ಟಿಕೆಟ್ ಸಿಕ್ಕಿದರೆ, ಎಂಟು ಗಂಟೆಗೂ ಅಧಿಕ ಹೊತ್ತು ಕಾದ ಹಲವರು ಟಿಕೆಟ್ ಸೋಲ್ಡ್ ಔಟ್ ಆಗಿದ್ದರಿಂದ ಬರಿಗೈಲಿ ವಾಪಾಸಾಗಿ ನಿರಾಸೆ ಅನುಭವಿಸಿದರು. ಇನ್ನೊಂದೆಡೆ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಟಿಕೆಟ್ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದರು.
ಮಳೆ ಅಡ್ಡಿ ದೂರ ಮಾಡಲು ಸಬ್ ಏರ್ ಸಿಸ್ಟಮ್ ಅಳವಡಿಸಿದ ನಂತರ ಮತ್ತು ಬರೋಬ್ಬರಿ 11 ತಿಂಗಳ ಬಳಿಕ ನಗರದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪಂದ್ಯ ಕೂಡ ಆಗಿರುವ ಕಾರಣಕ್ಕೆ ಟಿಕೆಟ್ ಗೆ ಭಾರಿ ಡಿಮಾಂಡ್ ಕಂಡುಬಂತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.