ಕ್ರಿಕೆಟ್

3 ನೇ ಟಿ20 ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ, 2-1 ಅಂತರದಿಂದ ಸರಣಿ ಕೈವಶ

Srinivas Rao BV
ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 3 ನೇ ಟಿ 20 ಪಂದ್ಯದಲ್ಲಿ ಭಾರತ 75 ರನ್ ಗಳಿಂದ ಜಯಗಳಿಸಿದ್ದು, 2-1 ಅಂತರದಿಂದ ಸರಣಿಯನ್ನು ಗೆದ್ದಿದೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಇಂಗ್ಲೆಂಡ್ ಗೆ 203 ರನ್ ಗಳ ಬೃಹತ್ ಗುರಿಯನ್ನು ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 16.3 ಓವರ್ ಗಳಲ್ಲಿ 127 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ ಶರಣಾಯಿತು. 
ಲೆಗ್‌ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರ ಕೈಚಳಕದಿಂದ ಭಾರತ ಇಂಗ್ಲೆಂಡ್ ವಿರುದ್ಧ 75 ರನ್ ಗಳ ಬೃಹತ್ ಅಂತರದಿಂದ ಗೆಲ್ಲಲು ಸಾಧ್ಯವಾಯಿತು. ಆರಂಭದಿಂದಲು ಇಂಗ್ಲೆಂಡ್ ಆಟಗಾರರನ್ನು ಕಟ್ಟಿಹಾಕಿದ್ದ ಚಾಹಲ್ 25 ರನ್ ಗಳನ್ನು ನೀಡಿ 6 ವಿಕೆಟ್ ಗಳನ್ನು ಕಬಳಿಸಿದರು.
SCROLL FOR NEXT