ನವದೆಹಲಿ: ಬಾಂಗ್ಲಾದೇಶದ ವಿರುದ್ಧದ ಏಕೈಕ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಫೆಬ್ರವರಿ 9 ರಂದು ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ.
ಬಿಸಿಸಿಐ ಸಿಇಓ ರಾಹುಲ್ ಚೋಹ್ರಿ ಕರೆದಿದ್ದ ಆಯ್ಕೆ ಸಮಿತಿ ಸಭೆಯಲ್ಲಿ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ಸ್ಥಾನಪಡೆದಿದ್ದಾರೆ.
ಟೀಂ ಇಂಡಿಯಾ ಟೆಸ್ಟ್ ತಂಡ
ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಂಜಿಕ್ಯಾ ರಹಾನೆ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್, ಅಮಿತ್ ಮಿಶ್ರಾ, ಅಭಿನವ್ ಮುಕುಂದ್, ಹಾರ್ಧಿಕ್ ಪಾಂಡ್ಯಾ.