ನವದೆಹಲಿ: ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಸರಿಯಾಗಿಲ್ಲ ಹೀಗಾಗಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೇಲಿನ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಗಂಗೂಲಿ ಮಾತನಾಡಿ, ಎಂಎಸ್ ಧೋನಿಗೆ ಅಗ್ರ ಕ್ರಮಾಂಕ ನೀಡಿ, ರೈನಾಗೆ ಆರನೇ ಕ್ರಮಾಂಕ ನೀಡಿದರೆ ಉತ್ತಮ ಎಂದು ಹೇಳಿದ್ದಾರೆ.
ಟೀಂ ಇಂಡಿಯಾ ಆರಂಭಿಕ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಧೋನಿ ಕೆಳ ಕ್ರಮಾಂಕದಲ್ಲಿ ಆಡಿ ರನ್ ಗಳಿಕೆ ಏರಿಸುವುದು ಸಾಧ್ಯವಿಲ್ಲ ಎಂದರು.