ಲೀಸೆಸ್ಟರ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ವೆಸ್ಟ್ ಇಂಡೀಸ್ ತಂಡ 6ನೇ ಅಲ್ಪಮೊತ್ತಕ್ಕೆ ಸರ್ವಪತನ ಕಂಡಿದೆ.
ಗ್ರೇಸ್ ರೋಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ತಂಡವನ್ನು 48 ರನ್ ಗಳಿಗೆ ಆಲೌಟ್ ಮಾಡಿತ್ತು. ನಂತರ ಅಲ್ಪಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತೆಯರು ವಿಕೆಟ್ ನಷ್ಟವಿಲ್ಲದೆ 6.2 ಓವರ್ ನಲ್ಲಿ 51 ರನ್ ಸಿಡಿಸಿ ಭರ್ಜರಿ ಜಯ ಗಳಿಸಿತು.
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಇನ್ನಿಂಗ್ಸ್ ಒಂದರಲ್ಲಿ ಅಲ್ಪಮೊತ್ತ ಗಳಿಸಿದ ತಂಡ ಪಾಕಿಸ್ತಾನ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 27 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 29 ರನ್ ಗಳಿಗೆ ಸರ್ವಪತನ ಕಾಣುವ ಮೂಲಕ ನೆದರ್ಲ್ಯಾಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಇನ್ನು ಭಾರತ ಸಹ 37 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೂರನೇ ಸ್ಥಾನದಲ್ಲಿದೆ.