ಕ್ರಿಕೆಟ್

ಬೇಷರತ್ ಕ್ಷಮೆಯಾಚಿಸಿ: ಮಾಜಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್‌ಗೆ 'ಸುಪ್ರೀಂ'

Vishwanath S
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರಿಗೆ ಸುಪ್ರೀಂಕೋರ್ಟ್ ಬೇಷರತ್ ಕ್ಷಮೆಯಾಚಿಸುವಂತೆ ಸೂಚಿಸಿದೆ. 
2016ರ ಜುಲೈ 18ರ ಲೋಧಾ ಸಮಿತಿ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ವಿಳಂಬ ಧೋರಣೆ ತೋರಿದ ಪ್ರಕರಣಕ್ಕೆ ಅಂತ್ಯವಾಡಬೇಕಾದರೆ ಇದೇ ಜುಲೈ 14ರಂದು ಸ್ವತಃ ಸುಪ್ರೀಂಕೋರ್ಟ್ ಗೆ ಹಾಜರಾಗಿ ಖುದ್ದು ಕ್ಷಮೆಯಾಚಿಸುವಂತೆ ಸೂಚಿಸಿದೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್ ಇದು ನನ್ನು ವೈಯಕ್ತಿಕ ಸಂಘರ್ಷವಲ್ಲ. ಇದು ಕ್ರೀಡಾ ಇಲಾಖೆಯ ಸ್ವಾಯತ್ತತೆಯ ಸಂಘರ್ಷವಾಗಿತ್ತು. ನನಗೆ ಸುಪ್ರೀಂ ಕೋರ್ಟ್ ಬಗ್ಗೆ ಅಪಾರ ಗೌರವವಿದೆ. ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ಬಿಸಿಸಿಐ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ನಂಬಿಕೆ ಸುಪ್ರೀಂಕೋರ್ಟ್ ಇರುವುದಾದರೆ ಅದಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದು ಠಾಕೂರ್ ಹೇಳಿದ್ದಾರೆ. 
SCROLL FOR NEXT