ಟೀಂ ಇಂಡಿಯಾ 
ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಮೇಲುಗೈ ಸಾಧಿಸುತ್ತೇವೆ: ಟೀಂ ಇಂಡಿಯಾ ಆಟಗಾರ್ತಿ ವೇದಾ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಮಹಿಳಾ ತಂಡ ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಜಯ...

ಲಂಡನ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಮಹಿಳಾ ತಂಡ ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಜಯ ಗಳಿಸುತ್ತೇವೆ ಎಂದು ಟೀಂ ಇಂಡಿಯಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹೇಳಿದ್ದಾರೆ. 
ಟೂರ್ನಿಯಲ್ಲಿ ಇಂಗ್ಲೆಂಡ್, ಪಾಕಿಸ್ತಾನ, ಶ್ರೀಲಂಕಾ, ಮತ್ತು ವೆಸ್ಟ್ ಇಂಡೀಸ್ ತಂಡಗಳ ವಿರುದ್ಧ ಜಯಭೇರಿ ಬಾರಿಸಿದ್ದೇವೆ. ಇನ್ನು ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ತಂಡ ಸೆಮಿಫೈನಲ್ ಗೆ ತಲುತ್ತೆ ಎಂಬ ಭರವಸೆಯನ್ನು ವೇದಾ ವ್ಯಕ್ತಪಡಿಸಿದ್ದಾರೆ. 
ದಕ್ಷಿಣ ಆಫ್ರಿಕಾದ ಸಾಮರ್ಥ್ಯ ಮತ್ತು ದುರ್ಬಲತೆಗಳನ್ನು ಅರಿತಿದ್ದು ಆಫ್ರಿಕಾ ವಿರುದ್ಧ ನಾವು ಮೈಲುಗೈ ಸಾಧಿಸುತ್ತೇವೆ. ಆಫ್ರಿಕಾ ವಿರುದ್ಧದ ಈ ಹಿಂದಿನ ನಾಲ್ಕೈದು ಪಂದ್ಯಗಳಲ್ಲಿ ಭಾರತ ತಂಡ ಉತ್ತಮವಾಗಿ ಆಡಿದೆ ವೇದಾ ಹೇಳಿದ್ದಾರೆ. 
ಕಳೆದ ತಿಂಗಳುಗಳ ಹಿಂದೆ ಆಫ್ರಿಕಾ ವಿರುದ್ಧ ಹಲವು ಪಂದ್ಯಗಳನ್ನಾಡಿದ್ದು ಅವರ ಸಾಮರ್ಥ್ಯ ಮತ್ತು ದುರ್ಬಲತೆಗಳು ನಮಗೆ ಚನ್ನಾಗಿ ತಿಳಿದಿದೆ. ಹೀಗಾಗಿ ಅವರ ವಿರುದ್ಧ ಮೈಲುಗೈ ಸಾಧಿಸುತ್ತೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT