ಕ್ರಿಕೆಟ್

ಬಿಸಿಸಿಐ ಕುಂಬ್ಳೆ, ದ್ರಾವಿಡ್, ಜಹೀರ್‌ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದ್ದು ಸರಿಯಲ್ಲ: ಗುಹಾ

Vishwanath S
ನವದೆಹಲಿ: ಟೀಂ ಇಂಡಿಯಾ ಕೋಚ್ ಹುದ್ದೆ ಆಯ್ಕೆಗೆ ಸಂಬಂಧಪಟ್ಟಂತೆ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಹೀರ್ ಖಾನ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸಾರ್ವಜನಿಕವಾಗಿ ಅವಮಾನ ಮಾಡಿದೆ ಎಂದು ಬಿಸಿಸಿಐನ ಆಡಳಿತ ಸಮಿತಿ ಮಾಜಿ ಸದಸ್ಯ ರಾಮಚಂದ್ರ ಗುಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರನ್ನು ಎರಡನೇ ಅವಧಿಗೆ ಮುಂದುವರೆಸಿದೆ ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿತ್ತು. ಇದೀಗ ಬ್ಯಾಟಿಂಗ್ ಕೋಚ್ ಆಗಿ ರಾಹುಲ್ ದ್ರಾವಿಡ್ ಮತ್ತು ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಅವರನ್ನು ಆಯ್ಕೆ ಮಾಡಿ ನಂತರ ಏಕಾಏಕಿ ತಡೆ ಹಿಡಿಯುವ ಮೂಲಕ ಆಡಳಿತಾಧಿಕಾರಿಗಳ ಸಮಿತಿಯ ದಿಗ್ಗಜ ಆಟಗಾರರನ್ನು ಸಾರ್ವಜನಿಕವಾಗಿ ಅವಮಾನಿಸಿದೆ ಎಂದು ಗುಹಾ ಅವರು ಟ್ವೀಟ್ ಮಾಡಿದ್ದಾರೆ. 
ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ ಹೊಸದಾಗಿ ಕೋಚ್ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ಅವರೊಂದಿಗೆ ಚರ್ಚಿಸಿದ ಬಳಿಕ ತಂಡದ ಇತರ ಸಹಾಯಕ ಕೋಚ್ ಗಳ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದೆ. ಈ ಮೂಲಕ ದ್ರಾವಿಡ್ ಮತ್ತು ಜಹೀರ್ ಕೋಚ್ ನೇಮಕವನ್ನು ತಡೆ ಹಿಡಿದಿದೆ. 
SCROLL FOR NEXT