ಕೊಲಂಬೋ: ಶ್ರೀಲಂಕಾ ಹಿರಿಯ ಸ್ಪಿನ್ ಬೌಲರ್ ರಂಗನಾ ಹೆರಾತ್ ಟೆಸ್ಟ್ ಕ್ರಿಕೆಟ್ ನ ಪಂದ್ಯವೊಂದರಲ್ಲಿ 8 ಬಾರಿ 10 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಸಮಗಟ್ಟಿದ್ದಾರೆ.
ರಂಗನಾ ಹೆರಾತ್ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಸಾಧನೆ ಮಾಡಿರುವವ ಸಾಲಿನಲ್ಲಿ ರಂಗನಾ ಹೆರಾತ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಶ್ರೀಲಂಕಾದ ದಂತಕತೆ ಮುತ್ತಯ್ಯಾ ಮುರಳಿಧರನ್ 22 ಬಾರಿ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ನಂತರ ಸ್ಥಾನದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ 10 ಬಾರಿ ಈ ಸಾಧನೆ ಮಾಡಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ರಿಚರ್ಡ್ ಹ್ಯಾಡ್ಲಿ 9 ಬಾರಿ ಈ ಸಾಧನೆ ಮಾಡಿ ಮೂರನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics