ಭರತ್ ಅರುಣ್-ರವಿಶಾಸ್ತ್ರಿ 
ಕ್ರಿಕೆಟ್

ರವಿಶಾಸ್ತ್ರಿಗೆ ಮಣಿದು ಭರತ್ ಅರುಣ್‌ರನ್ನು ಭಾರತದ ಬೌಲಿಂಗ್ ಕೋಚ್ ಮಾಡಿದ ಬಿಸಿಸಿಐ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ರವಿಶಾಸ್ತ್ರಿಗೆ ಮಣಿಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭರತ್ ಅರುಣ್‌ರನ್ನು...

ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ರವಿಶಾಸ್ತ್ರಿಗೆ ಮಣಿಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭರತ್ ಅರುಣ್‌ರನ್ನು ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿದೆ. 
ಇದಕ್ಕೂ ಮುನ್ನ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ರಾಹುಲ್ ದ್ರಾವಿಡ್ ರನ್ನು ನೇಮಕ ಮಾಡಿತ್ತು. ಇದಕ್ಕೆ ರವಿಶಾಸ್ತ್ರಿ ವಿರೋಧಿಸಿದ್ದರು. ಅಲ್ಲದೆ ಜಹೀರ್ ಖಾನ್ ಬದಲಿಗೆ ಭರತ್ ಅರುಣ್‌ರನ್ನು ಬೌಲಿಂಗ್ ಕೋಚ್ ಆಗಿ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಇದಕ್ಕೆ ಬಿಸಿಸಿಐ ಮಣಿದಿದೆ. 
ಈ ಹಿಂದೆ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿದ್ದ ಸಂಜಯ್ ಬಂಗಾರ್ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದ್ದು ಆರ್ ಶ್ರೀಧರ್ ರನ್ನು ಫೀಲ್ಡಿಂಗ್ ಕೋಚ್ ಆಗಿ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ