ಬಾಲಿವುಡ್ ನಟ ಶಾರುಖ್ ಖಾನ್ಗೆ ಸಂಕಷ್ಟ: ಜಾರಿ ನಿರ್ದೇಶನಾಲಯದಿಂದ ಸಮನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್)ನಲ್ಲಿ ಅಕ್ರಮ ಹೂಡಿಕೆ ಮಾಡಿದ್ದಾರೆ ಎಂದು ಆರೋಪದಡಿ...
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್)ನಲ್ಲಿ ಅಕ್ರಮ ಹೂಡಿಕೆ ಮಾಡಿದ್ದಾರೆ ಎಂದು ಆರೋಪದಡಿ ಬಾಲಿವುಡ್ ನಟ ಶಾರುಖ್ ಖಾನ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದಡಿ ಕೆಕೆಆರ್ ತಂಡದ ಮಾಲೀಕ ಶಾರುಖ್ ಖಾನ್ ಅವರಿಗೆ ಸಮನ್ಸ್ ನೀಡಿರುವ ಜಾರಿ ನಿರ್ದೇಶನಾಲಯ ಜುಲೈ 23ರೊಳಗೆ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಸೂಚಿಸಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೌತಮ್ ಗಂಭೀರ್ ಮುನ್ನಡೆಸುತ್ತಿದ್ದಾರೆ. ಕೆಕೆಆರ್ ತಂಡ ಎರಡು ಬಾರಿ ಐಪಿಎಲ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.