ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಭಾರತ ಐಸಿಸಿ ಮಹಿಳಾ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ: ಸೌರವ್ ಗಂಗೂಲಿ

ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಟೀಂ...

ಹರ್ಮನ್ ಪ್ರೀತ್ ಕೌರ್-ಸೌರವ್ ಗಂಗೂಲಿ
Vishwanath S
Updated On : 22 Jul 2017, 6:33 am
ಕೋಲ್ಕತ್ತಾ: ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಇದೇ ವೇಳೆ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ 171 ರನ್ ಬಾರಿಸಿದ ಟೀಂ ಇಂಡಿಯಾ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಆಟವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. 
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಆಟ ಅತ್ಯುತ್ತಮವಾಗಿತ್ತು. ಇದೇ ರೀತಿ ಆಟ ಮುಂದುವರೆಸಿದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವನಿತೆಯರು ಜಯಶಾಲಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು. 

Advertisement

Advertisement

ಟೀಂ ಇಂಡಿಯಾ ಮಹಿಳಾ ತಂಡ ಫೈನಲ್ ತಲುಪಿದ್ದು ನಾಳೆ ಇಂಗ್ಲೆಂಡ್ ಜತೆ ಸೆಣೆಸಲಿದೆ. ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಆರು ಬಾರಿ ಮಹಿಳಾ ವಿಶ್ವಕಪ್ ಗೆದ್ದಿದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 36 ರನ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು.
2005ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿ ಫೈನಲ್ ಪ್ರವೇಶಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments