ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಇಂಗ್ಲೆಂಡ್ ಮುಡಿಗೆ ಐಸಿಸಿ ಮಹಿಳಾ ವಿಶ್ವಕಪ್!

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 9 ರನ್ ಗಳ ಅಂತರದಲ್ಲಿ ಮಣಿಸಿದ ಇಂಗ್ಲೆಂಡ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.

ಲಂಡನ್‌: ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 9 ರನ್ ಗಳ ಅಂತರದಲ್ಲಿ ಮಣಿಸಿದ ಇಂಗ್ಲೆಂಡ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ.
ಇಂಗ್ಲೆಂಡ್ ನೀಡಿದ್ದ 228 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಮಿಥಾಲಿ ರಾಜ್ ಪಡೆ ಕೇವಲ 219 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಇಂಗ್ಲೆಂಡ್ ವಿರುದ್ಧ 9 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಅನುಭವಿಸಿತು.
ಚೊಚ್ಚಲ ವಿಶ್ವಕಪ್‌ ಗೆಲ್ಲುವ ಮಹದಾಸೆಯೊಂದಿಗೆ ಕಣಕ್ಕಿಳಿದ ಮಿಥಾಲಿ ರಾಜ್‌ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ ಇಂಗ್ಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿತಾದರೂ, ಇಂಗ್ಲೆಂಡ್ ಪ್ರಭಾವಿ ಬೌಲಿಂಗ್ ದಾಳಿಗೆ ನಲುಗಿ 219 ರನ್ ಗಳಿಗೆ ಶರಣಾಯಿತು. ಇಂಗ್ಲಂಡ್‌ ತಂಡ ನೀಡಿದ 228 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫ‌ಲರಾದ ಭಾರತೀಯ ಮಹಿಳಾ ಆಟಗಾರ್ತಿಯರು ಅಂತಿಮವಾಗಿ 48.4 ಓವರುಗಳಲ್ಲಿ 219 ರನ್ ಗಳಿಗೆ ಆಲೌಟ್‌ ಆಗುವ ಮೂಲಕ ಹಾಲಿ ಚಾಂಪಿಯನ್ನರಿಗೆ 9 ರನ್ ಗಳಿಂದ ಶರಣಾದರು.
ಭಾರತಕ್ಕೆ ಪೂನಂ ರಾವತ್‌ (86ರನ್) ಉತ್ತಮ ಆರಂಭ ಒದಗಿಸಿದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸೆಮಿ ಫೈನಲ್‌ ಪಂದ್ಯದ ಹೀರೋಯಿನ್‌ ಹರ್ಮನ್‌ ಪ್ರೀತ್‌ ಕೌರ್‌ (51ರನ್) ಮತ್ತು ವೇದ ಕೃಷ್ಣಮೂರ್ತಿ (35ರನ್) ಚೊಚ್ಚಲ ವಿಶ್ವಕಪ್‌ ಗೆಲ್ಲುವ ಕನಸಿಗೆ ಇನ್ನಷ್ಟು ಬಲ ತುಂಬಿದರು. ಆದರೆ 19 ರನ್ ಗಳ ಅಂತರದಲ್ಲಿ ಪ್ರಮುಖ 5 ವಿಕೆಟ್‌ಗಳು ಉರುಳಿದ್ದು ಮಿಥಾಲಿ ಪಡೆಗೆ ಮಾರಕವಾಯಿತು.
ಇಂಗ್ಲಂಡ್‌ ಪರ ಮಧ್ಯಮ ವೇಗಿ ಆನ್ಯಾ ಶ್ರುಭ್ಸೋಲ್‌ 6 ವಿಕೆಟ್‌ ಪಡೆದು ಮಿಂಚಿ ಆಂಗ್ಲರ ಪಾಲಿನ ಗೆಲುವಿನ ರೂವಾರಿಯಾದರು. ಅಂತಿಮವಾಗಿ ಭಾರ‌ತ 219 ರನ್ ಗಳಿಗೆ ಆಲೌಟ್‌ ಆಗಿ ಕೇವಲ 9 ರನ್ ಗಳಿಂದ ವಿಶ್ವಕಪ್‌ ಟ್ರೋಫಿಗೆ ಮುತ್ತಿಕ್ಕುವ ಅವಕಾಶದಿಂದ ವಂಚಿತಗೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT