ಮಿಥಾಲಿ ರಾಜ್-ಸಾನಿಯಾ ಮಿರ್ಜಾ
ಹೈದರಾಬಾದ್: ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಕ್ರಿಕೆಟ್ ನ ಅದ್ಭುತ ರಾಯಬಾರಿ ಎಂದು ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹೇಳಿದ್ದಾರೆ.
ಹಲವು ವರ್ಷಗಳಿಂದ ಮಿಥಾಲಿ ರಾಜ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರೇ ಕ್ರಿಕೆಟ್ ನ ಅದ್ಭುತ ರಾಯಬಾರಿ. ಇನ್ನು ವಿಶ್ವಕಪ್ ತಂಡದಲ್ಲಿ ಆಡಿದ್ದ ಎಲ್ಲಾ ಆಟಗಾರ್ತಿಯರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದರು.
ಮಿಥಾಲಿ ರಾಜ್ ಸದ್ಯ ಮಹಿಳಾ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ರನ್ ಸಿಡಿಸಿರುವ ದಾಖಲೆ ಮಾಡಿದ್ದಾರೆ. 186 ಪಂದ್ಯಗಳನ್ನು ಆಡಿರುವ ಅವರು 6,190 ರನ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ 9 ರನ್ ಗಳ ಅಂತರದಿಂದ ಸೋಲು ಕಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics