ವೇದಾ ಕೃಷ್ಣಮೂರ್ತಿ-ರಾಜೇಶ್ವರಿ ಗಾಯಕ್ವಾಡ್
ಉಡುಪಿ: ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ರನ್ನರಪ್ ಆಗಿದ್ದು ತಂಡದಲ್ಲಿ ಆಡಿದ್ದ ಇಬ್ಬರು ಕನ್ನಡತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 25 ಲಕ್ಷ ಬಹುಮಾನ ಘೋಷಿಸಿದೆ.
ತಂಡದಲ್ಲಿ ಮಧ್ಯಮ ಕ್ರಮಾಂಕದ ಆಟಗಾರ್ತಿ ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಹಾಗೂ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಬಹುಮಾನ ಘೋಷಿಸಿದ್ದಾರೆ.
ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 9 ರನ್ ಗಳಿಂದ ಪರಾಭವಗೊಂಡಿತ್ತು.
ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಫೈನಲ್ ಪಂದ್ಯದಲ್ಲಿ ಆಡಿದ್ದ ಆಟಗಾರ್ತಿಯರಿಗೆ 50 ಲಕ್ಷ ಬಹುಮಾನ ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics