ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಡಕ್ ಔಟ್ ಮೂಲಕ ದಾಖಲೆ ಬರೆದ ದಕ್ಷಿಣ ಆಫ್ರಿಕಾ!

ಲಂಡನ್ ನ ಓವಲ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ದ.ಆಫ್ರಿಕಾ ಕಳಪ ಪ್ರದರ್ಶನದಲ್ಲೂ ದಾಖಲೆಯೊಂನ್ನು ನಿರ್ಮಿಸಿದೆ.

ಲಂಡನ್: ಲಂಡನ್ ನ ಓವಲ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ದ.ಆಫ್ರಿಕಾ ಕಳಪ ಪ್ರದರ್ಶನದಲ್ಲೂ ದಾಖಲೆಯೊಂನ್ನು ನಿರ್ಮಿಸಿದೆ.

ನಿನ್ನೆ ಮುಕ್ತಾಯವಾದ ಮೂರನೇ ಟೆಸ್ಟ್ ನ ಎರಡನೆ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾದ ಆಟಗಾರರು ಶೂನ್ಯ ಸಾಧನೆ ಮೂಲಕ ಇತಿಹಾಸದ ಪುಟ ಸೇರಿದ್ದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿ ನಾಲ್ವರು ದಾಂಡಿಗರು ಸೊನ್ನೆ  ಸುತ್ತಿದ್ದಾರೆ. ದಕ್ಷಿಣ ಆಫ್ರಿಕ ವಿರುದ್ಧ ಆಲ್‌ರೌಂಡರ್ ಮೊಯಿನ್ ಅಲಿ ಹ್ಯಾಟ್ರಿಕ್ ಸೇರಿದಂತೆ 45ಕ್ಕೆ 4 ವಿಕೆಟ್ ಉರುಳಿಸಿ ಇಂಗ್ಲೆಂಡ್‌ ಗೆ ಮೂರನೆ ಟೆಸ್ಟ್‌ನಲ್ಲಿ 239 ರನ್‌ಗಳ ಭರ್ಜರಿ ಜಯ ದಾಖಲಿಸಲು ನೆರವಾಗಿದ್ದರು.

ಲಂಡನ್ ನ ಪ್ರತಿಷ್ಟಿತ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ 100ನೇ ಟೆಸ್ಟ್ ಪಂದ್ಯ ಇದಾಗಿದ್ದು, ಈ ಐತಿಹಾಸಿಕ ಪಂದ್ಯದಲ್ಲಿ ಮೋಯಿನ್ ಅಲಿ ಮೊದಲವ ಬಾರಿಗೆ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇದು ಓವಲ್ ಕ್ರೀಡಾಂಗಣದಲ್ಲಿ  ದಾಖಲಾದ ಮೊದಲ ಹ್ಯಾಟ್ರಿಕ್ ಎಂಬ ದಾಖಲೆಯನ್ನು ಬರೆದಿದೆ. ಇಂಗ್ಲೆಂಡ್ ನ ಮೋಯಿನ್ ಅಲಿ ಅವರು 76ನೆ ಓವರ್‌ ನ 5 ಮತ್ತು 6ನೆ ಎಸೆತದಲ್ಲಿ ದಕ್ಷಿಣ ಆಫ್ರಿಕದ ಡೀನ್ ಎಲ್ಗರ್ (136), ಕಾಗಿಸೊ ರಬಾಡ(0) ಅವರನ್ನು  ಪೆವಿಲಿಯನ್‌ಗೆ ಅಟ್ಟಿದರು. ಬಳಿಕ 78ನೆ ಓವರ್‌ನ ಮೊದಲ ಎಸೆತದಲ್ಲಿ ಮೊರ್ನೆ ಮೊರ್ಕೆಲ್(0)ರನ್ನು ಬಂದ ದಾರಿಯಲ್ಲೇ ಹಿಂದಕ್ಕೆ ಕಳುಹಿಸುವ ಮೂಲಕ ಹ್ಯಾಟ್ರಿಕ್ ಪಡೆದಿದ್ದಾರೆ.

ಇದಕ್ಕೂ ಮೊದಲು ಅಲಿ ಅವರು ಕ್ರಿಸ್ ಮೋರಿಸ್ ವಿಕೆಟ್‌ನ್ನು ಪಡೆದಿದ್ದರು. ಅಲಿ 1938ರ ಬಳಿಕ ಓವಲ್ ಕ್ರೀಡಾಂಗಣದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ ಇಂಗ್ಲೆಂಡ್‌ನ ಮೊದಲ ಸ್ಪಿನ್ನರ್ ಎನಿಸಿಕೊಂಡಿದ್ದಾರೆ. ಚೊಚ್ಚಲ  ಟೆಸ್ಟ್ ಆಡಿದ ಇಂಗ್ಲೆಂಡ್‌ ನ ಬೌಲರ್ ಟೊಬೈ ರೊನಾಲ್ಡ್-ಜೊನ್ಸ್ ಎರಡನೆ ಇನಿಂಗ್ಸ್‌ನಲ್ಲಿ 2 ವಿಕೆಟ್ ಪಡೆಯುವ ಮೂಲಕ ಈ ಟೆಸ್ಟ್‌ನಲ್ಲಿ 129ಕ್ಕೆ 8 ವಿಕೆಟ್ ಪಡೆದಿದ್ದಾರೆ. ಈ ಅವಿಸ್ಮರಣೀಯ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ  ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT