ಅನಿಲ್ ಕುಂಬ್ಳೆ ಮತ್ತು ನನ್ನ ಮಧ್ಯೆ ಯಾವುದೇ ಮನಸ್ತಾಪ ಇಲ್ಲ: ವಿರಾಟ್ ಕೊಹ್ಲಿ
ಭಾರತೀಯ ಕ್ರಿಕೆಟ್ ತಂಡದ ಕೋಚ್ ಅನಿಲ್ ಕುಂಬ್ಳೆ ಮತ್ತು ನನ್ನ ಮಧ್ಯೆ ಯಾವುದೇ ಮನಸ್ತಾಪ ಇಲ್ಲ ಎಂದು ಟೀಂ ಇಂಡಿಯಾ....
ಲಂಡನ್: ಭಾರತೀಯ ಕ್ರಿಕೆಟ್ ತಂಡದ ಕೋಚ್ ಅನಿಲ್ ಕುಂಬ್ಳೆ ಮತ್ತು ನನ್ನ ಮಧ್ಯೆ ಯಾವುದೇ ಮನಸ್ತಾಪ ಇಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಶನಿವಾರ ಹೇಳಿದ್ದಾರೆ.
ಕೋಚ್ ಆನಿಲ್ ಕುಂಬ್ಳೆ ಹಾಗೂ ನಾಯಕ ವಿರಾಟ್ ಕೊಹ್ಲಿ ಸಂಬಂಧ ಹಳಸಿದೆ, ಅವರಿಬ್ಬರು ಪರಸ್ಪರ ಮುಖ ಕೂಡ ನೋಡಿಕೊಳ್ಳುವುದಿಲ್ಲ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ವಿರಾಟ್ ಕೊಹ್ಲಿ, ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ-ಪಾಕಿಸ್ತಾನದ ವಿರುದ್ಧ ಆರಂಭಿಕ ಪಂದ್ಯವಾಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಭಿನ್ನಾಭಿಪ್ರಾಯದ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ, ನಮ್ಮ ಇಬ್ಬರ ಮಧ್ಯೆ ಯಾವುದೇ ಸಮಸ್ಯೆಯಾಗಲಿ, ಮನಸ್ತಾಪವಾಗಲಿ ಇಲ್ಲ. ಈ ರೀತಿ ಯಾಕೆ ಸೃಷ್ಟಿಸಿದ್ದಾರೆ ಅಂತ ನನಗೆ ಗೊತ್ತಾಗುತ್ತಿಲ್ಲ. ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಸಂಪೂರ್ಣ ಗಮನಹರಿಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಬಿಸಿಸಿಐ ನೂತನ ಕೋಚ್ ಗಾಗಿ ಅರ್ಜಿ ಆಹ್ವಾನಿಸಿದ ಬಗ್ಗೆ ಯಾವುದೇ ಪ್ರಕಿಕ್ರಿಯೆ ನೀಡಲು ವಿರಾಟ್ ಕೊಹ್ಲಿ ಅವರು ನಿರಾಕರಿಸಿದ್ದಾರೆ.
ಭಾನುವಾರ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯ ಆಡಲಿದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಸೆಣೆಸಲಿದೆ. ಆದರೆ ಮಾತ್ರ ಪಾಕ್ ಸವಾಲು ಎದುರಿಸಲು ಸಿದ್ಧವಾಗಿಲ್ಲ. ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ಅನಿಲ್ ಕುಂಬ್ಳೆ ನಡುವಿನ ಮನಸ್ತಾಪ ದೊಡ್ಡದಾಗತೊಡಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.