ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 124 ರನ್ ಗಳ ಅಂತರದಿಂದ (ಡಕ್ವರ್ಥ್ ಲೂಯಿಸ್ ನಿಯಮದಡಿ) ಬಗ್ಗುಬಡಿದ ಭಾರತ ಭರ್ಜರಿ ಗೆಲುವು ಸಾಧಿಸಿದೆ.

ಕ್ರಿಕ್ ಇನ್ಫೋ ಚಿತ್ರ
Srinivasa Murthy VN
Updated On : 5 Jun 2017, 10:48 am
ಬರ್ಮಿಂಗ್ ಹ್ಯಾಮ್: ಮಿನಿ ವಿಶ್ವಕಪ್ ಎಂದೇ ಖ್ಯಾತಿ ಗಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 124 ರನ್ ಗಳ ಅಂತರದಿಂದ (ಡಕ್ವರ್ಥ್ ಲೂಯಿಸ್ ನಿಯಮದಡಿ) ಬಗ್ಗುಬಡಿದು ಭರ್ಜರಿ  ಗೆಲುವು ಸಾಧಿಸಿದೆ.
ಇಂಗ್ಲೆಂಡ್ ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಕೊಹ್ಲಿ ಪಡೆ ನಿರೀಕ್ಷೆಗೂ ಮೀರಿದ ಜಯ ಸಾಧಿಸಿದೆ. ಭಾರತ ನೀಡಿದ್ದ 324 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನಕ್ಕೆ  ಮಳೆ ಅಡ್ಡಿಯಾಗಿತ್ತು. ಆದರೆ ಬಳಿಕ ಮಳೆ ನಿಂತಾಗ ಡಕ್ವರ್ಥ್ ಲೂಯಿಸ್ ನಿಯಮದನ್ವಯ ಪಂದ್ಯವನ್ನು 41 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಅಂತೆಯೇ ರನ್ ಗುರಿಯನ್ನು ಕೂಡ 41 ಓವರ್ ಗಳಿಗೆ 289 ರನ್ ಗಳು ಎಂದು ನಿಗದಿ ಪಡಿಸಲಾಯಿತು. ಈ ಗುರಿಯನ್ನು ಬೆನ್ನು ಹತ್ತಿದ  ಪಾಕಿಸ್ತಾನ ಭಾರತೀಯ ಬೌಲರ್ ಗಳ ಕರಾರುವಕ್ಕಾದ ದಾಳಿಗೆ ತತ್ತರಿಸಿ 33.4 ಓವರ್ ಗಳಲ್ಲಿ ಕೇವಲ 164 ರನ್ ಗಳಿಗೆ 9 ವಿಕೆಟ್ ಕಳೆದುಕೊಂಡಿತು. ಇನ್ನು ಅಂತಿಮ ಬ್ಯಾಟ್ಸಮನ್ ವಹಾಬ್ ರಿಯಾಜ್ ಫೀಲ್ಡಿಂಗ್ ವೇಳೆ ಗಾಯಗೊಂಡ ಪರಿಣಾಮ ಬ್ಯಾಟಿಂಗ್ ಇಳಿಯಲಿಲ್ಲ.
ಹೀಗಾಗಿ ಅಂತಿಮವಾಗಿ ಭಾರತ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಅದರಂತೆ ಪಾಕಿಸ್ತಾನದ ವಿರುದ್ಧ ಭಾರತ 124 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

Advertisement

Advertisement

ಇನ್ನು ಪಂದ್ಯದಲ್ಲಿ ಭಾರತೀಯ ಬೌಲರ್ ಗಳು ಅದ್ಬುತ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ವಿಕೆಟ್ ಹಾಗೂ ಪಾಂಡ್ಯಾ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.
 ಅಂತೆಯೇ ಕೇವಲ 39 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಭಾರತ ತಂಡದ ರನ್ ಗತಿಗೆ ವೇಗ ನೀಡಿದ ಯುವರಾಜ್ ಸಿಂಗ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments