ಬರ್ಮಿಂಗ್ ಹ್ಯಾಮ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಚಾಂಪಿಯನ್ಸ್ ಟ್ರೋಫಿಯ ಟೂರ್ನಿಯ ಭಾರತ ಪಂದ್ಯದ ವೇಳೆ ಕಾಣಿಸಿಕೊಂಡಿದ್ದಾರೆ.
ಇಂಗ್ಲೆಂಡ್ ನಲ್ಲಿ ಬೀಡು ಬಿಟ್ಟಿರುವ ವಿಜಯ್ ಮಲ್ಯ ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ವಿಐಪಿ ಸ್ಟ್ಯಾಂಡ್ ನಲ್ಲಿ ಕುಳಿತು ವೀಕ್ಷಿಸಿದ್ದಾರೆ.
ಮಲ್ಯ ಪಂದ್ಯ ವೀಕ್ಷಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.