ಕ್ರಿಕ್ ಇನ್ಫೋ ಚಿತ್ರ 
ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ; ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ!

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುರುವಾರ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗುರುವಾರ ಶ್ರೀಲಂಕಾ ಮತ್ತು ಭಾರತ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಲಂಡನ್ ನ ದಿ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಪಾಕಿಸ್ತಾನದ ವಿರುದ್ಧ ಗೆದ್ದು ಆತ್ಮವಿಶ್ವಾಸದಿಂದಿರುವ ಕೊಹ್ಲಿ ಪಡೆ ಎಂಜಲೋ ಮ್ಯಾಥ್ಯೂಸ್ ಪೆಡಯನ್ನು ಮಣಿಸಿ ಸೆಮಿಫೈನಲ್ ಗೇರಲು ಸಿದ್ಧತೆ ನಡೆಸಿಕೊಂಡಿದೆ.

ಹಾಲಿ ಚಾಂಪಿಯನ್‌ ಎನ್ನುವ ಹೆಸರಿಗೆ ತಕ್ಕಂತೆ ಆಟವಾಡುತ್ತಿರುವ ಭಾರತ, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 124 ರನ್‌ಗಳ ಅಂತರದ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಶುಭಾರಂಭ ಮಾಡಿತ್ತು. ಇಂದು ಸಿಂಹಳೀಯರ ಬೇಟೆಯಾಡಿ ಸೆಮಿಫೈನಲ್‌ಗೇರುವ ತವಕದಲ್ಲಿದೆ. ಮೊದಲ ಪಂದ್ಯದಲ್ಲಿ ಆಫ್ರಿಕನ್ನರ ವಿರುದ್ಧ ಹೀನಾಯವಾಗಿ ಸೋತಿರುವ ಲಂಕನ್ನರಿಗಿಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಪಂದ್ಯ ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಲಂಕಾ ತಂಡದ ನಾಯಕ ಎಂಜಲೋ ಮ್ಯಾಥ್ಯೂಸ್ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಗಾಯದ ಸಮಸ್ಯೆಯಿಂದಾಗಿ ಅವರು ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ. ಬೌಲಿಂಗ್ ಮಾಡುವುದಿಲ್ಲ ಎಂದು ಲಂಕಾ ತಂಡ ಸ್ಪಷ್ಟಪಡಿಸಿದೆ.

ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸುವ ಆತಂಕ ಎದುರಾಗಿದ್ದು, ಮತ್ತೆ ಡಕ್ವರ್ಥ್ ಲೂಯಿಸ್ ನಿಯಮ ಪ್ರಾಮುಖ್ಯತೆ ಪಡೆಯುವ ಸಾಧ್ಯತೆ ಇದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಭಾರತಕ್ಕೆ ಲಾಭವಾಗಲಿದ್ದು, ಒಂದು ಗೆಲುವಿನಿಂದ ಭಾರತ 2 ಅಂಕ ಪಡೆದುಕೊಂಡಿದೆ. ಪಂದ್ಯ ರದ್ದಾದರೆ ಒಂದು ಅಂಕ ಸಿಗಲಿದೆ. ಜತೆಗೆ ನೆಟ್‌ ರನ್‌ರೇಟ್‌ ಸಹ ಅತ್ಯುತ್ತಮವಾಗಿರುವ ಕಾರಣ, ಭಾರತಕ್ಕೆ ಸೆಮೀಸ್‌ ಅವಕಾಶ ಮುಕ್ತವಾಗಿರಲಿದೆ.

ಭಾರತದ ಪರ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್ ಫಾರ್ಮ್ ಕಂಡುಕೊಂಡಿರುವುದು ಭಾರತಕ್ಕೆ ಆನೆ ಬಲ ಬಂದಂತಾಗಿದ್ದು, ನಾಯಕ ವಿರಾಟ್‌ ಕೊಹ್ಲಿ, ಯುವರಾಜ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಎಡ್ಜ್ ಬ್ಯಾಸ್ಟನ್ ಪ್ರದರ್ಶನವನ್ನೇ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್