ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಟೀಂ ಇಂಡಿಯಾ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ದಕ್ಷಿಣ ಆಫ್ರಿಕಾ ನಾಯಕ ಎಬಿ ಡಿವಿಲಿಯರ್ಸ್ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಎಬಿಡಿ ವಿಲಿಯರ್ಸ್ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ಟೀಂ ಇಂಡಿಯಾ ವಿರುದ್ಧ ನಡೆಯಲಿರುವ ಪಂದ್ಯದಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
ಎಬಿಡಿ ವಿಲಿಯರ್ಸ್ ಅವರನ್ನು ಶನಿವಾರ ಫಿಟ್ನೆಸ್ ಪರೀಕ್ಷೆಗೆ ಒಳಪಡಿಸಲಾಗುವುದು ಅದರಲ್ಲಿ ಅವರು ಫಿಟ್ನೆಸ್ ಸಾಬೀತುಪಡಿಸಿದರೆ ಮಾತ್ರ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್ಎ) ಸ್ಪಷ್ಟಪಡಿಸಿದೆ.