ಬಾಂಗ್ಲಾ ತಂಡವನ್ನು ಸುಲಭವಾಗಿ ಪರಿಗಣಿಸುವುದಿಲ್ಲ: ವಿರಾಟ್ ಕೊಹ್ಲಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದು, ಬಾಂಗ್ಲಾವನ್ನು...
ಬರ್ಮಿಂಗ್ ಹ್ಯಾಮ್: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಎದುರಿಸಲಿದ್ದು, ಬಾಂಗ್ಲಾವನ್ನು ಸುಲಭವಾಗಿ ಪರಿಗಣಿಸುವುದಿಲ್ಲ ಎಂದು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಸೆಮಿಫೈನಲ್ ಪಂದ್ಯ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಟ್ ಕೊಹ್ಲಿ, ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು ಸುಲಭವಾಗಿ ಪರಿಗಣಿಸುವುದಿಲ್ಲ, ನಾಕೌಟ್ ಹಂತದಲ್ಲಿ ಆಡುವುದಕ್ಕೂ ಸೆಮಿಫೈನಲ್ ನಲ್ಲಿ ಆಡುವುದಕ್ಕೂ ಬಹಳ ವ್ಯತ್ಯಾಸವಿರುತ್ತದೆ ಎಂದು ಹೇಳಿದ್ದಾರೆ.
ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ನಾವು ಸುಲಭವಾಗಿ ಗೆಲುವು ಸಾಧಿಸಿರಬಹುದು ಆದರೆ ಬಾಂಗ್ಲಾ ಕೆಲವೊಂದು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ನಾಳೆಯ ಪಂದ್ಯ ವಿಭಿನ್ನವಾಗಿರಲಿದೆ ಎಂದು ವಿರಾಟ್ ಹೇಳಿದರು.