ಶಿಖರ್ ಧವನ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಕ್ರಿಕೆಟಿಗ ಧವನ್!

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಈಗಾಗಲೇ ಅತೀ ಹೆಚ್ಚು ರನ್ ಗಳಿಸಿ ಗೋಲ್ಡನ್ ಬ್ಯಾಟ್ ಪ್ರಶಸ್ತಿ ಆಕಾಂಕ್ಷಿಯಾಗಿರುವ ಭಾರತದ ಶಿಖರ್ ಧವನ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಲಂಡನ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಈಗಾಗಲೇ ಅತೀ ಹೆಚ್ಚು ರನ್ ಗಳಿಸಿ ಗೋಲ್ಡನ್ ಬ್ಯಾಟ್ ಪ್ರಶಸ್ತಿ ಆಕಾಂಕ್ಷಿಯಾಗಿರುವ ಭಾರತದ ಶಿಖರ್ ಧವನ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಚಾಂಪಿಯನ್ಸ್ ಟ್ರೋಫಿ  ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಶಿಖರ ಧವನ್ ಈ ವರೆಗೂ ಚಾಂಪಿಯನ್ಸ್ ಟ್ರೋಫಿಯಲ್ಲಿ 9 ಪಂದ್ಯಗಳನ್ನಾಡಿದ್ದು, 85.00 ಸರಾಸರಿಯಲ್ಲಿ ಮತ್ತು 101.79 ಸ್ಟ್ರೈಕ್ ರೇಟ್ ನಲ್ಲಿ ಒಟ್ಟು 680 ರನ್ ಕಲೆಹಾಕಿದ್ದಾರೆ. ಆ ಮೂಲಕ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ  ಹೆಚ್ಚು ರನ್ ಗಳಿಕೆ ಮಾಡಿದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಹೆಸರಲಿತ್ತು. ಗಂಗೂಲಿ ಒಟ್ಟು 11 ಪಂದ್ಯಗಳಲ್ಲಿ  665 ರನ್ ಕಲೆ ಹಾಕಿದ್ದರು. ಇದೀಗ ಈ ದಾಖಲೆಯನ್ನು ಧವನ್ ಹಿಂದಿಕ್ಕಿದ್ದಾರೆ.

ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವ ಕ್ರಿಕೆಟಿಗರ ಪಟ್ಟಿಯಲ್ಲಿ ಧವನ್ 4ನೇ ಸ್ಥಾನ ಪಡೆದಿದ್ದು, ವೆಸ್ಟ್ ಇಂಡೀಸ್ ನ ದೈತ್ಯ ಕ್ರಿಸ್ ಗೇಯ್ಲ್ ಮೊದಲ ಸ್ಥಾನದಲ್ಲಿದ್ದಾರೆ. ಗೇಯ್ಲ್ ಒಟ್ಟು 17  ಪಂದ್ಯಗಳಲ್ಲಿ 791 ರನ್ ಸಿಡಿಸಿದ್ದು, 2ನೇ ಸ್ಥಾನದಲ್ಲಿರುವ ಶ್ರೀಲಂಕಾದ ಆಟಗಾರ ಮಹೇಲಾ ಜಯವರ್ಧನೆ ಇದ್ದು ಅವರು 21 ಪಂದ್ಯಗಳಲ್ಲಿ 742 ರನ್ ಗಳಿಸಿದ್ದಾರೆ. ಇದೇ ಶ್ರೀಲಂಕಾ ತಂಡದ ಕುಮಾರ ಸಂಗಕ್ಕಾರ 3ನೇ  ಸ್ಥಾನದಲ್ಲಿದ್ದು, 21 ಪಂದ್ಯಗಳಿಂದ ಅವರು 383 ರನ್ ಗಳಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಧವನ್ ಇದ್ದರೆ, ಐದನೇ ಸ್ಥಾನದಲ್ಲಿ ಗಂಗೂಲಿ ಇದ್ದಾರೆ.

ಆರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸಮನ್ ಜಾಕ್ ಕಾಲಿಸ್ ಇದ್ದು, ಅವರು ಒಟ್ಟು 17 ಪಂದ್ಯಗಳಿಂದ 653 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್