ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಕುಂಬ್ಳೆ ರಾಜೀನಾಮೆ ಬಗ್ಗೆ ದಾದಾ ಹೇಳಿದ್ದೇನು ಗೊತ್ತಾ?

ಸೆಹ್ವಾಗ್, ಕುಂಬ್ಳೆ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ರಾಜೀನಾಮೆ ನೀಡಿರುವುದು ಕುಂಬ್ಳೆ ಅವರ ವೈಯಕ್ತಿಕ ನಿರ್ಧಾರ ಈ ಬಗ್ಗೆ...

ಅನಿಲ್ ಕುಂಬ್ಳೆ-ಸೌರವ್ ಗಂಗೂಲಿ
Srinivas Rao BV
Updated On : 23 Jun 2017, 12:49 pm
ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿರುವ ಬಗ್ಗೆ ಹಿರಿಯ ಆಟಗಾರರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕುಂಬ್ಳೆ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ಬೆನ್ನಲ್ಲೇ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ರಾಜೀನಾಮೆ ನೀಡಿರುವುದು ಕುಂಬ್ಳೆ ಅವರ ವೈಯಕ್ತಿಕ ನಿರ್ಧಾರ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದಿದ್ದಾರೆ. 
ವಿರಾಟ್ ಕೋಹ್ಲಿ ತಮ್ಮದೇ ಕಟ್ಟುಪಾಡುಗಳನ್ನು ಹೊಂದಿದ್ದರು, ನನ್ನ ಶೈಲಿ ಅವರಿಗೆ ಸರಿ ಹೊಂದುತ್ತಿರಲಿಲ್ಲ. ಆದ್ದರಿಂದ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕುಂಬ್ಳೆ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೌರವ್ ಗಂಗೂಲಿ ಕೋಚ್ ಸ್ಥಾನಕ್ಕೆ ಕುಂಬ್ಳೆ ಕೊನೆ ಘಳಿಗೆಯಲ್ಲಿ ರಾಜೀನಾಮೆ ನೀಡಿದ್ದಾರೆ ರಾಜೀನಾಮೆ ನೀಡಿರುವುದು ಕುಂಬ್ಳೆ ವೈಯಕ್ತಿಕ ನಿರ್ಧಾರವಾಗಿದೆ. ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement