ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಶುಭಾರಂಭ ಮಾಡಿರುವಂತೆಯೇ ತಂಡದ ನಾಯಕಿ ಮಿಥಾಲಿ ರಾಜ್ ತಮ್ಮ ಅದ್ಬುತ ಫಾರ್ಮ್ ಮೂಲಕ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಿಥಾಲಿ ಕೇವಲ 73 ಎಸೆತಗಳಲ್ಲಿ 71 ರನ್ ಸಿಡಿಸಿ ಆಕರ್ಷಕ ಅರ್ಧಶತಕ ದಾಖಲಿಸಿದ್ದರು. ಇದು ಅವರ ವೃತ್ತಿ ಜೀವನದ 47ನೇ ಅರ್ಧಶತಕವಾಗಿದ್ದು, ಅಂತೆಯೇ ಈ ಸಾಲಿನ ಸತತ 7ನೇ ಅರ್ಧಶತಕವಾಗಿದೆ. ಆ ಮೂಲಕ ಮಿಥಾಲಿ ರಾಜ್ ಸತತ ಏಳು ಅರ್ಧಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
1999ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ ರಾಜ್ ಅವರು ಈ ವರೆಗೂ 178 ಏಕದಿನ ಪಂದ್ಯಗಳನ್ನಾಡಿದ್ದು, 52.25 ಸರಾಸರಿಯಲ್ಲಿ 5852 ರನ್ ಸಿಡಿಸಿದ್ದಾರೆ. ಈ ಪೈಕಿ 5 ಶತಕ ಹಾಗೂ 47 ಅರ್ಧಶತಕಗಳನ್ನು ಸಿಡಿಸಿದ್ದಾರೆ.