ಟೀಂ ಇಂಡಿಯಾ ಕೋಚ್ ಆಗುವಷ್ಟು ಅನುಭವವಿಲ್ಲ: ಜಯವರ್ಧನೆ
ಟೀಂ ಇಂಡಿಯಾ ಕೋಚ್ ಆಗುವಷ್ಟು ಅನುಭವವಿಲ್ಲ, ತಾವು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ...
ಕೊಲೊಂಬೊ: ಟೀಂ ಇಂಡಿಯಾ ಕೋಚ್ ಆಗುವಷ್ಟು ಅನುಭವವಿಲ್ಲ, ತಾವು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಸ್ಪಷ್ಟಪಡಿಸಿದ್ದಾರೆ.
ಭಾರತ ಕೋಚ್ ಹುದ್ದೆಗೆ ಜಯವರ್ಧನೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಲಂಕಾ ಮಾಜಿ ಆಟಗಾರ ಈ ಸುದ್ದಿ ನನ್ನನ್ನು ಅಚ್ಚರಿಗೊಳಿಸಿದೆ. ಪೂರ್ಣಾವಧಿ ಹುದ್ದೆಗಳಿಗೆ ನಾನಿನ್ನೂ ಸಿದ್ಧವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಗ್ರಾಹಂ ಫೋರ್ಡ್ ನಿರ್ಗಮನದಿಂದ ತೆರವುಗೊಂಡಿರುವ ಶ್ರೀಲಂಕಾ ತಂಡದ ಕೋಚ್ ಆಗಲು ಅವರಿಗೆ ಅನುಭವ ಸಾಲದು ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ತಿಲಂಗಾ ಸುಮತಿಪಾಲ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.